ಕೊಡಗುಕ್ರೈಂ

ಕೊಡಗು: ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸ್ಥಳದಲ್ಲೇ ಸಾವು, ಕಣ್ಣೀರಾದ ಕುಟುಂಬ

ನ್ಯೂಸ್ ನಾಟೌಟ್ : ಕರ್ತವ್ಯದಲ್ಲಿದ್ದ ಲೈನ್ ಮ್ಯಾನ್ ವೊಬ್ಬರು ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಇಂದು ಬೆಳಗ್ಗೆ 9 ಗಂಟೆಗೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕುಟ್ಟಂದಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ವಿರಾಜಪೇಟೆ ಚೆಸ್ಕಾಂ ಸಿಬ್ಬಂದಿ ಬಸವರಾಜ್ ತೆಗ್ಗಿ (26 ವರ್ಷ) ಎಂದು ಗುರುತಿಸಲಾಗಿದೆ. ಬಸವರಾಜ್ ತೆಗ್ಗಿ ಮೂಲತಃ ಬಾಗಲಕೋಟೆ ಜಿಲ್ಲೆಯ ಮಾರ್ನಾಲು ನಿವಾಸಿಯಾಗಿದ್ದಾರೆ.

ಬಸವರಾಜ್ ಕಳೆದ ಐದು ವರ್ಷಗಳಿಂದ ವಿರಾಜಪೇಟೆ ಚೆಸ್ಕಾಂ ಕಾರ್ಯ ನಿರ್ವಹಿಸುತ್ತಿದ್ದರು. ಬಸವರಾಜ್ ಇಂದು ಬೆಳಗ್ಗೆ ಒಂಬತ್ತು ಗಂಟೆಯ ಸಮಯದಲ್ಲಿ ಕುಟ್ಟಂದಿ ಗ್ರಾಮದಲ್ಲಿ ಮನೆಯೊಂದರಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹವನ್ನು ಇಡಲಾಗಿದೆ.

Related posts

ತಂಗಿ ಮೇಲೆ ಅಣ್ಣನಿಂದಲೇ ಅತ್ಯಾಚಾರ!

ಪಾಕ್‌ಗೆ ಹೋಗಿ ನಸ್ರುಲ್ಲಾ ನನ್ನು ಮದುವೆಯಾಗಿದ್ದ ಅಂಜು ಮತ್ತೆ ಭಾರತಕ್ಕೆ ಬಂದದ್ದೇಕೆ..? ಫಾತಿಮಾಳಾಗಿ ಬದಲಾಗಿದ್ದ ವಿವಾಹಿತ ಅಂಜುಗೆ ಮತ್ತೇನಾಯ್ತು..?

ಸ್ಕೂಟಿ ಮತ್ತು ಜೀಪ್ ನಡುವೆ ಅಪಘಾತ, ಸ್ಕೂಟಿ ಸವಾರನಿಗೆ ಗಾಯ, ಆಸ್ಪತ್ರೆಗೆ ದಾಖಲು