ನ್ಯೂಸ್ ನಾಟೌಟ್: ವ್ಯಕ್ತಿಯೊಬ್ಬರು ಮಂಗಳವಾರ(ಮಾ.25) ಬೆಳಗ್ಗೆ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದಲ್ಲಿ ನಡೆದಿದೆ.
ನೆಲಜಿ ಗ್ರಾಮದ ನಿವಾಸಿ ಚಿಯಕಪೂವಂಡ ರಂಜು ತಿಮ್ಮಯ್ಯ(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.
ರಂಜು ತಿಮ್ಮಯ್ಯ ಸಾಲಬಾಧೆಯಿಂದ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದರಿಂದಾಗಿ ಮಾ. 25ರಂದು ಬೆಳಗ್ಗೆ ನೆಲಜಿ ಗ್ರಾಮದ ತಮ್ಮ ಮನೆ ಸಮೀಪದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಂಜು ತಿಮ್ಮಯ್ಯ ಅವರ ಪತ್ನಿ ತಾರಾಮಣಿ ನೀಡಿದ ದೂರಿನಿಂದ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಮಗಳ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್..! ಮಗಳು ಗರ್ಭವತಿಯಾದ ಬಳಿಕ ವಿಷಯ ಬಹಿರಂಗ..!