Latest

ಚಿಕ್ಕಮಗಳೂರು:ಸ್ವಿಮ್ಮಿಂಗ್ ಪೂಲ್ ಗೆ ಧುಮುಕಿದ ವ್ಯಕ್ತಿ:ಕುಶಾಲನಗರ ಮೂಲದ ಮೊಬೈಲ್ ಶಾಪ್ ಮಾಲೀಕ ಸಾವು

647

ನ್ಯೂಸ್‌ ನಾಟೌಟ್: ಕುಶಾಲನಗರದ ಮೊಬೈಲ್ ಗ್ಯಾಲರಿ ಮಾಲೀಕರೊಬ್ಬರು  ಸ್ವಿಮ್ಮಿಂಗ್ ಪೂಲ್ ಗೆ ಧುಮುಕಿದ ವೇಳೆ ಬೆನ್ನುಮೂಳೆಗೆ ಘಾಸಿಯುಂಟಾಗಿ, ಚಿಕಿತ್ಸೆ ಫಲಿಸದೇ ಮೊಬೈಲ್ ಶಾಪ್ ಮಾಲೀಕ ಮಂಗಳೂರಿನ ಎನಪೋಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಬಗ್ಗೆ ವರದಿಯಾಗಿದೆ.ಕುಶಾಲನಗರದ ಮೊಬೈಲ್ ಗ್ಯಾಲರಿ ಮಾಲೀಕ ನಿಶಾಂತ್ (35) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ನಿಶಾಂತ್ ಕೊಡಗಿನ ಕುಶಾಲನಗರದಿಂದ ಚಿಕ್ಕಮಗಳೂರಿಗೆ 10 ಮಂದಿ ಸ್ನೇಹಿತರೊಂದಿಗೆ ಶನಿವಾರ ಪ್ರವಾಸಕ್ಕೆಂದು ತೆರಳಿದ್ದರು. ಈ ವೇಳೆ ಭಾನುವಾರ ಇಲ್ಲಿನ ಖಾಸಗಿ ರೆಸಾರ್ಟ್‌ನ (Resort) ಸ್ವಿಮ್ಮಿಂಗ್ ಪೂಲ್ ಗೆ ಧುಮುಕುವ ವೇಳೆ ಬೆನ್ನುಮೂಳೆಗೆ ಘಾಸಿಯಾಗಿದೆ ಎನ್ನಲಾಗಿದೆ. ತಕ್ಷಣವೇ ನಿಶಾಂತ್ ರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಎನಪೋಯಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಶಾಂತ್ ಕೊನೆಯುಸಿರೆಳೆದಿದ್ದಾರೆ.

See also  ಅಳುವ ಹೆಂಡತಿ ಪಡೆದ ಗಂಡಂದಿರೇ ಅದೃಷ್ಟವಂತರಂತೆ! ಏನಿದರ ಒಳಗುಟ್ಟು?
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget