ಕರಾವಳಿಕೊಡಗು

ಮಡಿಕೇರಿ:ವಿದ್ಯಾರ್ಥಿಗಳಿಗೆ ಮುಂದಿನ ತಿಂಗಳಿಂದ ರಾಗಿ ಮಾಲ್ಟ್,ವಾರಕ್ಕೆರಡು ಮೊಟ್ಟೆ ವಿತರಣೆ; ಸಚಿವ ಮಧು ಬಂಗಾರಪ್ಪ ಹೇಳಿದ್ದೇನು? ಇಲ್ಲಿದೆ ವರದಿ

169

ನ್ಯೂಸ್ ನಾಟೌಟ್ :ಸರಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮುಂದಿನ ತಿಂಗಳಿನಿಂದ ರಾಗಿ ಮಾಲ್ಟ್ ನೀಡಲು ಚಿಂತಿಸಲಾಗಿದೆ.ಈಗಾಗಲೇ ವಾರದಲ್ಲಿ ಒಂದು ದಿನ ಮೊಟ್ಟೆ ವಿತರಿಸಲಾಗುತ್ತಿದ್ದು, ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ಪೊನ್ನಂಪೇಟೆ ಪ್ರವಾಸಿ ಮಂದಿರದಲ್ಲಿ ಸೋಮವಾರ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಈ ಮಾತುಗಳನ್ನಾಡಿದ್ರು.

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಹಲವು ಸಮಸ್ಯೆಗಳಿವೆ.ಅವುಗಳು ಗಮನಕ್ಕೆ ಬಂದಿದ್ದು, ಅವುಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುತ್ತಿದೆ. 13 ಸಾವಿರ ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮ ವಹಿಸಲಾಗಿದ್ದು, 37 ಸಾವಿರ ಶಿಕ್ಷಕರನ್ನು ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ರು.ಸರಕಾರಿ ಶಾಲೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಸರಕಾರ ಅಗತ್ಯ ಕೈಗೊಂಡಿದೆ. ಸರಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕ ಸೇರಿದಂತೆ ಮಧ್ಯಾಹ್ನದ ಬಿಸಿ ಊಟ, ಮೊಟ್ಟೆ ಹಾಗೂ ಹಾಲು ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ತಲುಪಿಸಲಾಗುತ್ತಿದೆ ಎಂದರು.

ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹೊರೆಯಾಗದಂತೆ ತಪ್ಪಿಸು ವಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು. ಕೊಡಗು ಜಿಲ್ಲೆಯಲ್ಲಿ ಶತಮಾನ ಪೂರೈಸಿರುವ ಶಾಲೆಗಳಿದ್ದು, ಅವುಗಳನ್ನು ಕರ್ನಾಟಕ ಪಬ್ಲಿಕ್‌ ಶಾಲೆ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ನೆಲದಲ್ಲಿ ಕೂರಬಾರದು. ಶಾಲೆಗಳಿಗೆ ಡೆಸ್ಕ್, ಬೆಂಚ್‌ ಇತರೆ ಸಾಮಗ್ರಿಗಳನ್ನು ವಿತರಿಸಲಾಗುವುದು.

See also  ಮೂಡಬಿದಿರೆ:ಮತ್ತೊಂದು ನಾಗರಹಾವಿಗೆ ಶಸ್ತ್ರ ಚಿಕಿತ್ಸೆ..! ಮಾಜಿ ಸಚಿವರ ಪ್ರಯತ್ನದಿಂದ ಮರು ಜೀವ ಪಡೆದ ಉರಗ!
Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget   Ad Widget