ಕರಾವಳಿಕೊಡಗು

ಮಡಿಕೇರಿ: ನಾಪತ್ತೆಯಾಗಿದ್ದ ಬಾಲಕಿ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆ..!,ಆಗಿದ್ದೇನು?

269

ನ್ಯೂಸ್ ನಾಟೌಟ್ : ನಾಪತ್ತೆಯಾಗಿದ್ದ ಬಾಲಕಿಯೋರ್ವಳು ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ.ಬಾಲಕಿ ನಾಪತ್ತೆಯಾಗಿ ಎರಡು ದಿನಗಳ ಬಳಿಕ ಮನೆ ಸಮೀಪದ ಕಾಫಿ ತೋಟವೊಂದರಲ್ಲಿ ಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿದೆ.

ಈಕೆ ಕೊಡಗಿನ ನಾಪೋಕ್ಲುವಿನ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದು,ಮರಂದೋಡು ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಈಕೆಯನ್ನು ಪತ್ತೆ ಹಚ್ಚಿದ್ದಾರೆ. ವಿದ್ಯಾರ್ಥಿನಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿದ್ದುದ್ದನ್ನು ಕಂಡು ಕೂಡಲೇ ಆಕೆಯನ್ನು ಮನೆಗೆ ಕರೆತಂದು ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಬಳಿಕ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು,ಚಿಕಿತ್ಸೆ ನೀಡಲಾಗಿದೆ. ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

See also  ಸುಳ್ಯ:ಅಸೌಖ್ಯದಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಫಲಿಸದೇ ಮೃತ್ಯು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget