ಕೊಡಗು

ಕೊಡಗು: ಶುಲ್ಕ ಕಟ್ಟಿಲ್ಲವೆಂದು ವಿದ್ಯಾರ್ಥಿಗಳನ್ನು ಹೊರಹಾಕಿದ ಶಾಲೆ, ಪ್ರಧಾನಿಗೆ ಪತ್ರ ಬರೆದ ಅಪ್ಪ..!

449
Spread the love

ಗೋಣಿಕೊಪ್ಪಲು: ಶಾಲೆಗೆ ಶುಲ್ಕ ಪಾವತಿಸಿಲ್ಲ ಎಂದು ಹೇಳಿ ವಿದ್ಯಾರ್ಥಿಗಳನ್ನು ಹೊರಕ್ಕೆ ಹಾಕಿದ್ದ ಶಾಲೆಯ ವಿರುದ್ಧ ಪೋಷಕರೊಬ್ಬರು, ಪ್ರಧಾನಮಂತ್ರಿ ನರೇಂದ್ರ ಮೋದಿ ಪತ್ರ ಮೂಲಕ ದೂರು ಸಲ್ಲಿಸಿದ ಘಟನೆ ನಡೆದಿದೆ.

ಇಲ್ಲಿನ ಕೂರ್ಗ್ ಪಬ್ಲಿಕ್ ಶಾಲೆಯಲ್ಲಿ 5ನೇ ತರಗತಿ ವಿದ್ಯಾರ್ಥಿ ಮುತ್ತಣ್ಣ ಸೇರಿದಂತೆ 20 ವಿದ್ಯಾರ್ಥಿಗಳನ್ನು ತರಗತಿಗೆ ಸೇರಿಸದೇ ಗ್ರಂಥಾಲಯದಲ್ಲಿ ಕೂರಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಬೇಸರಗೊಂಡ ಮುತ್ತಣ್ಣ ಎಂಬ ವಿದ್ಯಾರ್ಥಿಯ ತಂದೆ ಬೆಳ್ಳಿಯಪ್ಪ ಡಿ.1ರಂದು ಪ್ರಧಾನ ಮಂತ್ರಿ ಕಚೇರಿಗೆ ಇ–ಮೇಲ್ ಮೂಲಕ ದೂರು ಸಲ್ಲಿಸಿದ್ದರು. ದೂರು ಬಂದ ಹಿನ್ನೆಲೆಯಲ್ಲಿ ಶಾಲೆಗೆ ತೆರಳಿದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಮುತ್ತಣ್ಣನನ್ನು ಅಜ್ಜಿಯೊಂದಿಗೆ ತಮ್ಮ ಕಚೇರಿಗೆ ಕರೆಸಿಕೊಂಡು ಮಾಹಿತಿ ಪಡೆದುಕೊಂಡರು. ಶಾಲೆಯ ಪ್ರಾಂಶುಪಾಲರೊಂದಿಗೆ ಚರ್ಚಿಸಿದ ಬಳಿಕ ವಿದ್ಯಾರ್ಥಿಯನ್ನು ತರಗತಿಗೆ ಸೇರಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಧಾರವಾಡದಲ್ಲಿ ನೆಲೆಸಿರುವ ವಿದ್ಯಾರ್ಥಿಯ ತಂದೆ ಬೆಳ್ಳಿಯಪ್ಪ, ‘ಈ ವರ್ಷ ₹60 ಸಾವಿರ ಕಟ್ಟಿದ್ದೇನೆ. ಕೋವಿಡ್ ಸಂಕಷ್ಟದ ಕಾಲದಲ್ಲಿಯೂ ಮತ್ತೆ ಶುಲ್ಕ ಏರಿಸಿದ್ದಾರೆ. ಅದರ ಬಗ್ಗೆ ಕೇಳಿದರೆ ಪ್ರಾಂಶುಪಾಲರು ಸರಿಯಾಗಿ ಉತ್ತರಿಸಲಿಲ್ಲ. ಕೇವಲ ವಾಟ್ಸ್ ಅಪ್‌ನಲ್ಲಿ ಮೆಸೇಜ್ ಹಾಕಿದ್ದರು. ಹೀಗಾಗಿ ಬೇಸರದಿಂದ ನೇರವಾಗಿ ಪ್ರಧಾನಮಂತ್ರಿಗೆ ಪತ್ರ ಬರೆದೆ. ಈಗ ಮಗನನ್ನು ತರಗತಿಗೆ ಸೇರಿಸುತ್ತಿದ್ದಾರೆ. ಅಲ್ಲಿಂದ ಏನು ಸಂದೇಶ ಬಂದಿತ್ತೋ ಗೊತ್ತಿಲ್ಲ ಎಂದು ಹೇಳಿದರು.

See also  ಕೊಡಗು ಸಂಪಾಜೆಗೆ ಸಂಸದ ಪ್ರತಾಪ್ ಸಿಂಹ ಭೇಟಿ
  Ad Widget   Ad Widget   Ad Widget   Ad Widget   Ad Widget   Ad Widget