ನ್ಯೂಸ್ ನಾಟೌಟ್: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಪರಿಸರದಲ್ಲಿ ಆನೆ ದಾಳಿಯಿಂದ ವ್ಯಕ್ತಿ ಮೃತಪಟ್ಟ ಘಟನೆ ಮಾಸುವ ಮೊದಲೇ ಮತ್ತೊಂದು ದುರ್ಘಟನೆ ಸಂಭವಿಸಿದೆ. ಕಾಡು ಹಂದಿಯೊಂದು ಅರಸಿನಮಕ್ಕಿ ಹತ್ಯಡ್ಕ ಗ್ರಾಮದ ಒಡ್ಯೆರೆ ಎಂಬಲ್ಲಿ ರೆಖ್ಯ ಗ್ರಾಮದ ಬೂಡು ನಿವಾಸಿ ಬಾಲಕೃಷ್ಣ ಎಂಬುವವರಿಗೆ ತಿವಿದು ಗಂಭೀರ ಗಾಯಗೊಳಿಸಿದೆ. ಸದ್ಯ ಅವರನ್ನು ಚಿಕಿತ್ಸೆಗಾಗಿ ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ.