ಕರಾವಳಿ

ಕೊಕ್ಕಡ: ಹೊಟ್ಟೆನೋವಿನಿಂದ  ಒಂದೇ ದಿನ ಗೆಳತಿಯರಿಬ್ಬರ ನಿಗೂಢ ಸಾವು ಪ್ರಕರಣ,ಮೇಲ್ನೋಟಕ್ಕೆ ಸಾವಿಗೆ ವಿಷ ಪ್ರಾಶನವೇ ಕಾರಣ

230

ನ್ಯೂಸ್ ನಾಟೌಟ್:ತೀವ್ರ ಹೊಟ್ಟೆ ನೋವಿನ ಕಾರಣದಿಂದ ನೆರೆಕರೆ ಮನೆಯ ಸ್ನೇಹಿತೆಯರಿಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಪಟ್ರಮೆ ಗ್ರಾಮದಲ್ಲಿ ಎ.೬ರಂದು ವರದಿಯಾಗಿತ್ತು.ಈ ಘಟನೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು,ಪ್ರಕರಣಕ್ಕೆ ಸಂಬಂಧಿಸಿ ಮೇಲ್ನೋಟದ ತನಿಖೆಯಲ್ಲಿ ವಿಷ ಪ್ರಾಶನವೇ ಕಾರಣ ಎಂಬುದು ತಿಳಿದುಬಂದಿದೆ ಎಂದು ವರದಿ ಹೇಳಿದೆ.

ರಕ್ಷಿತಾ ಮೊದಲಿಗೆ ಮೃಪಟ್ಟರೆ ಲಾವಣ್ಯ ಬಳಿಕ ಮೃಪಟ್ಟಿದ್ದಳು. ರಕ್ಷಿತಾ ಹಾಗೂ ಲಾವಣ್ಯ ಅವರಿಬ್ಬರೂ ಒಂದೇ ದಿನ ಮೃತಪಟ್ಟರೆ ಒಂದೇ ಸಮಯಕ್ಕೆ ವಿಷಪ್ರಾಶನ ಮಾಡಿದರೇ ಎಂಬ ಅನುಮಾನ ಕೂಡ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿತ್ತು.ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಹಲವು ಆಯಾಮಗಳಲ್ಲಿಯೂ ತನಿಖೆ ಮುಂದುವರಿಸಲಾಗಿದೆ ಎಂದು ತಿಳಿದು ಬಂದಿದೆ. ಯಾವುದಾದರು ಘಟನೆ ಸಂಭವಿಸಿ ಆಘಾತದಿಂದ ವಿಷಪ್ರಾಶನ ಮಾಡಿದ್ದಾರೆಯೇ ಎಂಬ ಅನುಮಾನವಿದ್ದು, ಮನೆಯವರಿಗೂ ಯಾವುದೇ ಸ್ಪಷ್ಟತೆ ಇಲ್ಲ. ಹಾಗಾಗಿ ಎಫ್‌.ಎಸ್‌.ಎಲ್‌. ವರದಿಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷಿಯಿದ್ದು, ಈ ಮಧ್ಯೆ ಬೇರೆ ಆಯಾಮಗಳಲ್ಲೂ ತನಿಖೆ ಮುಂದುವರಿಸಲಾಗಿದೆ ಎಂದು ದ.ಕ.ಜಿಲ್ಲಾ ಎಸ್‌.ಪಿ. ಅಮಟೆ ವಿಕ್ರಮ್‌ ತಿಳಿಸಿದ್ದಾರೆ.

ಈ ಕುರಿತು ಶುಕ್ರವಾರ ಧರ್ಮಸ್ಥಳ ಪೊಲೀಸ್‌ ಠಾಣೆ ಎಸ್‌.ಐ. ಅನಿಲ್‌ ಹಾಗೂ ಸಿಬ್ಬಂದಿ ಮೃತರ ಮನೆಗೆ ಭೇಟಿ ನೀಡಿ ಒಂದಷ್ಟು ಮಾಹಿತಿ ಕಲೆ ಹಾಕಿದ್ದಾರೆ. ಇಬ್ಬರು ಸೇವಾ ಪ್ರತಿನಿಧಿಗಳಾಗಿ ಕರ್ತವ್ಯದಲ್ಲಿದ್ದು,ಉತ್ತಮ ಸೇವೆ ಸಲ್ಲಿಸುತ್ತಿದ್ದರು ಹಾಗೂ ಊರಿನಲ್ಲಿ ಇವರ ಬಗ್ಗೆ ಉತ್ತಮ ಅಭಿಪ್ರಾಯವೂ ಕೇಳಿ ಬಂದಿತ್ತು. ಈ ಪೈಕಿ ಲಾವಣ್ಯ ಮಾರ್ಚ್‌ ವರ್ಷಾಂತ್ಯಕ್ಕೆ ಹುದ್ದೆಗೆ ರಾಜಿನಾಮೆ ಸಲ್ಲಿಸಿದ್ದರು ಎಂದು ತಿಳಿದು ಬಂದಿದೆ.ಮೃತ ರಕ್ಷಿತಾ ಹಾಗೂ ಲಾವಣ್ಯ ಅವರ ಮನೆಗೆ ಶನಿವಾರ ಶಾಸಕ ಹರೀಶ್‌ ಪೂಂಜ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು. ಈ ವೇಳೆ ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್‌ ಆಲಂಬಿಲ, ಪಟ್ರಮೆ ಗ್ರಾ.ಪಂ. ಉಪಾಧ್ಯಕ್ಷರಾದ ಯತೀಶ್‌, ಗ್ರಾ.ಪಂ. ಸದಸ್ಯರಾದ ಮನೋಜ್‌ ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಪಟ್ರಮೆ ಗ್ರಾಮದ ಪಟ್ಟೂರಿನ ಬಾಬು ಹಾಗೂ ಗೀತ ದಂಪತಿಗಳ ಪುತ್ರಿ ರಕ್ಷಿತಾ (22) ಮತ್ತು ಆಕೆಯ ನೆರೆಮನೆಯ ಶ್ರೀನಿವಾಸ ಆಚಾರಿ ಹಾಗೂ ಪಾರ್ವತಿ ದಂಪತಿಗಳ ಪುತ್ರಿ ಲಾವಣ್ಯ (20) ಮೃತಪಟ್ಟ ಯುವತಿಯರಾಗಿದ್ದರು.ಇಬ್ಬರೂ ಕೂಡ ಕಳೆದೊಂದು ವರ್ಷದಿಂದ ಅನಾರು ಹಾಗೂ ಮುಂಡೂರುಪಳಿಕೆ-ಉಪ್ಪಾರಪಳಿಕೆ ವಲಯದ ಸೇವಾ ನಿರತೆಯರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರಿಬ್ಬರು ಪರಸ್ಪರ ಸ್ನೇಹಿತೆಯಾಗಿದ್ದರು.ಭಾನುವಾರದಂದು ಇಬ್ಬರಿಗೂ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.

See also  ಯತೀಶ್ ಅನ್ನುವ ವ್ಯಕ್ತಿಯ ಬಂಧನವಾಗಿಲ್ಲ: ಎಸ್‌ಪಿ ಸ್ಪಷ್ಟನೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget