ಪುತ್ತೂರು

ಕೊಕ್ಕಡ-ಸೌತಡ್ಕ ದರೋಡೆ ಪ್ರಕರಣ: ಇಬ್ಬರು ಆರೋಪಿಗಳನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು

981

ಗೋಳಿತೊಟ್ಟು: ಕೊಕ್ಕಡ ಸೌತಡ್ಕ ಸಮೀಪದ ಕೌಕ್ರಾಡಿ ಗ್ರಾಮದ ನೂಜೆ ತುಕ್ರಪ್ಪ ಶೆಟ್ಟಿ ಎಂಬವರ ಮನೆ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಪ್ರಮುಖ ಆರೋಪಿಗಳನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ನೆಲ್ಯಾಡಿ ಹೊಸಮಜಲು ನಿವಾಸಿ ಚಂದ್ರಶೇಖರ ಶೆಟ್ಟಿ (50 ) ಹಾಗೂ ಸುರತ್ಕಲ್ ನ ಸೂರಿಂಜೆಯ ದಾವೂದ್ ಹಕೀಂ (36 ) ಬಂಧಿತ ಆರೋಪಿಗಳೆಂದು ತಿಳಿದು ಬಂದಿದೆ. ಕಳೆದ ಡಿಸೆಂಬರ್‌ ನಲ್ಲಿ ತುಕ್ರಪ್ಪ ಶೆಟ್ಟಿ ಅವರ ಮನೆಗೆ ನುಗ್ಗಿದ ದರೋಡೆಕೋರರು ತುಕ್ರಪ್ಪ ಶೆಟ್ಟಿ ಹಾಗೂ ಅವರ ಪತ್ನಿ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ರೂ. ಚಿನ್ನಾಭರಣ ದೋಚಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಹು ದಿನಗಳ ನಂತರ ಪೊಲೀಸರು ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

See also  ನಿಲ್ಲಿಸಿದ್ದ ಬೈಕ್ ಗಳಿಂದ ಪೆಟ್ರೋಲ್ ಕದ್ದ ಖದೀಮರು,ಸಾರ್ವಜನಿಕರಿಗೆ ಸಿಕ್ಕಿಬಿದ್ದರೂ ಕಳ್ಳರು ಎಸ್ಕೇಪ್
  Ad Widget   Ad Widget   Ad Widget   Ad Widget   Ad Widget   Ad Widget   Ad Widget