ಕರಾವಳಿಮಹಿಳೆ-ಆರೋಗ್ಯಸುಳ್ಯ

ಕೊಲ್ಲಮೊಗ್ರು: ಕೆ.ವಿ.ಜಿ ಮೆಡಿಕಲ್ ಕಾಲೇಜು ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರ, ಕಣ್ಣಿನ ತಪಾಸಣೆ ಮಾಡಿಸಿಕೊಂಡ ಸಾರ್ವಜನಿಕರು

233

ನ್ಯೂಸ್ ನಾಟೌಟ್ : ಕೆ ವಿ ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಜೊತೆಗೆ ಜಿಲ್ಲಾ ಅಂಧತ್ವ ನಿಯಂತ್ರಣ ಸೊಸೈಟಿ (ರಿ ) ಮಂಗಳೂರು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರು, ಇವರ ಸಹಯೋಗದೊಂದಿಗೆ ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೆ.24ರಂದು ನಡೆಸಲಾಗಿತ್ತು.

ಕೊಲ್ಲಮೊಗ್ರು ಗ್ರಾಮದ ಸಾರ್ವಜನಿಕರು ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಲು ಶಿಬಿರದಲ್ಲಿ ಪಾಲ್ಗೊಂಡು ತಮ್ಮ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳುವುದರೊಂದಿಗೆ ಕಣ್ಣಿನ ಆರೋಗ್ಯ ಮಾಹಿತಿಗಳನ್ನು ಪಡೆಯುವ ಮೂಲಕ ಶಿಬಿರದ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಂಡರು.

ಶಿಬಿರದಲ್ಲಿ ಕೆ ವಿ ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡಾ ಮಹೇಶ್ ಬಾಬು ಮತ್ತು ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ ಕುಲದೀಪ್ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಶ್ರೀ ಉಪಸ್ಥಿತರಿದ್ದರು.

Click

https://newsnotout.com/2024/09/4-year-old-babyies-are-misused-by-school-staff-kannada-news-encountered/
https://newsnotout.com/2024/09/tirupati-telangana-kannada-news-devotee-allegation-kannada-news/
https://newsnotout.com/2024/09/294-mobiles-phones-are-exports-illegally-to-nepal-cought-kannada-news/

See also  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿಯ ಅದ್ದೂರಿ ವಿವಾಹ,ಉಡುಪಿಯ ಅದಮಾರು ಮಠದ ಬ್ರಾಹ್ಮಣ ಸಂಪ್ರದಾಯ ಪ್ರಕಾರ ನೆರವೇರಿದ ಮದುವೆ!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget