ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಬಡ ಕುಟುಂಬದವರು ಮನೆ ಕಟ್ಟಲು ನೀಡಲಾಗುತ್ತಿದ್ದ ಅನುದಾನವನ್ನು ಐದು ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು. ವಿಕಾಸ ಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರಿಶಿಷ್ಟ ಜಾತಿಯ ಬಡ ಕುಟುಂಬಗಳು ಮನೆ ನಿರ್ಮಿಸಲು ಈ ಹಿಂದೆ 1.70 ಲಕ್ಷ ರೂಪಾಯಿ ಅನುದಾನ ನೀಡಲಾಗುತ್ತಿತ್ತು. ಆದರೆ, ಈ ಅನುದಾನದಲ್ಲಿ ಉತ್ತಮ ಮನೆ ನಿರ್ಮಿಸಲು ಸಾಧ್ಯವಿಲ್ಲ, ಹಾಗಾಗಿ ಐದು ಲಕ್ಷ ರೂ.ಗೆ ಏರಿಕೆ ಮಾಡಲು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.