ಕ್ರೈಂರಾಜ್ಯವೈರಲ್ ನ್ಯೂಸ್

ಕಾರಿಗೆ ಗುದ್ದಿದ ಕೆ.ಎಸ್.ಆರ್.ಟಿ.ಸಿ ಬಸ್..! ಸ್ಥಳದಲ್ಲೇ ಮೂವರು ಮೃತ್ಯು

37
Spread the love

ನ್ಯೂಸ್ ನಾಟೌಟ್: ಓಮ್ನಿ ಕಾರು ಮತ್ತು ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓಮ್ನಿಯಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ದಾವಣಗೆರೆಯ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ -ಶಿವಪುರ ಬಳಿಯ ರಾಜ್ಯ ಹೆದ್ದಾರಿಯಲ್ಲಿ (ಎ.11) ಇಂದು ನಡೆದಿದೆ.

ಘಟನೆಯಲ್ಲಿ ಆರಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಹರಬಗಟ್ಟದ ನಂಜುಂಡ್ಪ(83), ಸೂರನಗೊಂಡಕೊಪ್ಪದ ದೇವರಾಜ್ (27) ಮತ್ತು ರಾಕೇಶ್ (30) ಮೃತಪಟ್ಟವರು ಎಂದು ಗುರುತಿಸಲಾಗಿದ್ದು. ಶಿಕಾರಿಪುರದ ಕಡೆಯಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮತ್ತು ಶಿವಮೊಗ್ಗದ ಕಡೆಯಿಂದ ಹೊರಟಿದ್ದ ಓಮ್ನಿ ಮಧ್ಯೆ ಅಪಘಾತವಾಗಿದೆ. ಆರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಈ ಪೈಕಿ ಚಿಂತಾಜನಕ ಸ್ಥಿತಿಯಲ್ಲಿದ್ದ ಇಬ್ಬರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

See also  ಪೊಲೀಸ್ ಮತ್ತು ಆರೋಪಿಯ ನಡುವೆ ಬೀದಿ ಜಗಳ..! ಇಲ್ಲಿದೆ ವಿಡಿಯೋ
  Ad Widget   Ad Widget   Ad Widget