ಕರಾವಳಿಬೆಂಗಳೂರುವೈರಲ್ ನ್ಯೂಸ್

ಗಣೇಶ ಚತುರ್ಥಿ ಪ್ರಯುಕ್ತ ಕೆಎಸ್​ಆರ್​ಟಿಸಿಯಿಂದ ಬಿಗ್ ಆಫರ್! ಹಬ್ಬದ ಪ್ರಯುಕ್ತ1200 ಹೆಚ್ಚುವರಿ ಬಸ್, ವಿಶೇಷ ರಿಯಾಯಿತಿ! ಎಲ್ಲಿಯೆಲ್ಲ ಲಭಿಸಲಿದೆ ಈ ಸೌಲಭ್ಯ?

181

ನ್ಯೂಸ್ ನಾಟೌಟ್: ರಾಜ್ಯದ ಮತ್ತು ಹೊರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಸೆ.18ರಂದು ಹೆಚ್ಚುವರಿ ಬಸ್​ಗಳನ್ನು ಹೊರಡಿಸಲಾಗುವುದು ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಗೌರಿ ಗಣೇಶ ಹಾಗೂ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ KSRTC 1200 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ವಾರಾಂತ್ಯ ದಿನಗಳಾದ ಸೆಪ್ಟೆಂಬರ್ 15, 16 ಮತ್ತು ಗೌರಿ ಗಣೇಶ ಹಬ್ಬದ ಪ್ರಯುಕ್ತ 18ರಂದು ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಹಲವು ಸ್ಥಳಗಳಿಗೆ 1200 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ ಎಂದು ವರದಿ ತಿಳಿಸಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದರ್ಗಿ‌, ಬೀದರ್, ತಿರುಪತಿ, ವಿಜಯವಾಡ. ಹೈದರಾಬಾದ್, ಮೈಸೂರು ರಸ್ತೆ ಬಸ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗಗಳಲ್ಲಿ

ಮತ್ತು ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ವರೆಗೆ ಈ ಹೆಚ್ಚುವರಿ ಸಂಚಾರ ಸೌಲಭ್ಯ ದೊರೆಯಲಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇ-ಟಿಕೆಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ದೊರೆಯಲಿದೆ. ಹೋಗುವ & ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

See also  ಕೇವಲ ರೂ. 1,499 ಖರೀದಿಗೆ ದುಬಾರಿ ಬೆಲೆಯ I PHONE ಗೆಲ್ಲಿ..! ಪುತ್ತೂರಿನ ದರ್ಬೆಯಲ್ಲಿ ಸಿಗುವ ಬಿಗ್ ಡಿಸ್ಕೌಂಟ್ ಎಲ್ಲೂ ಸಿಗಲ್ಲ, ಇಂದೇ ಭೇಟಿ ಕೊಡಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget