ನ್ಯೂಸ್ ನಾಟೌಟ್: ತಿರುವಿನಲ್ಲಿ ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಗುದ್ದಿ ಕೆಎಸ್ ಆರ್ ಟಿಸಿ ಬಸ್ ಹಳ್ಳಕ್ಕೆ ಮಗುಚಿ ಬಿದ್ದ ಪರಿಣಾಮ ಬೈಕ್ ನಲ್ಲಿದ್ದ ಸಬ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಮನಗರದ ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರ ಪೊಲೀಸ್ ಠಾಣೆ ಸಮೀಪ ನಡೆದಿದೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಬ್ ಇನ್ಸ್ ಪೆಕ್ಟರ್ ನಾಗರಾಜು ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಸ್ತೆ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಎದುರಿಗೆ ಬರುತ್ತಿದ್ದ ಬೈಕ್‌ಗೆ ಬಸ್ ಡಿಕ್ಕಿ ಹೊಡೆದಿದ್ದು, ಬಳಿಕ ಹಳ್ಳಕ್ಕೆ ಮಗುಚಿ ಬಿದ್ದಿದೆ.
ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಪುತ್ತೂರು: ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಬೈಕ್..! ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವು..!