Latestಉಪ್ಪಿನಂಗಡಿಕರಾವಳಿಕ್ರೈಂವೈರಲ್ ನ್ಯೂಸ್

KSRTC ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ..! ದ್ವಿಚಕ್ರ ವಾಹನ ಸವಾರ ಸಾವು..!

851
Spread the love

ನ್ಯೂಸ್ ನಾಟೌಟ್: KSRTC ಬಸ್ ಮತ್ತು ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಸೋಮವಾರ(ಮಾ.10) ಸಂಭವಿಸಿದೆ.

ಬಿಳಿನೆಲೆ ಗ್ರಾಮದ ಚೇರು ನಿವಾಸಿ ದಿ.ವಿಶ್ವನಾಥ ಎಂಬವರ ಪುತ್ರ ವಿನ್ಯಾಸ್ (23) ಮೃತರು ಎಂದು ಗುರುತಿಸಲಾಗಿದೆ.

ಕಡಬ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಕೈಕಂಬ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ನಡುವೆ ಬಿಳಿನೆಲೆ ಗ್ರಾಮದ ಕೈಕಂಬ ಕೋಟೆಹೊಳೆ ಬಳಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ವಿನ್ಯಾಸ್‌ ನನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ವರದಿ ತಿಳಿಸಿದೆ. ಕಡಬ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪತರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

See also  ಸಂಪಾಜೆ: ಗೌರಿ ಲಂಕೇಶ್ ಹತ್ಯೆ ಪ್ರಕರಣ, ಸಂಪಾಜೆಯ ನಿವಾಸಿಗೆ ಸುದೀರ್ಘ 6 ವರ್ಷದ ಬಳಿಕ ಜಾಮೀನು
  Ad Widget   Ad Widget   Ad Widget