ನ್ಯೂಸ್ ನಾಟೌಟ್: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಐಟಿ (ವಿಶೇಷ ತನಿಖಾ ದಳ) ನಡೆಸುತ್ತಿರುವ ಶೋಧ ಕಾರ್ಯದ ವರದಿಯನ್ನು ನೀಡುತ್ತಿರುವ ಕುಡ್ಲ ರಾಂ ಪೇಜ್ ನ ಅಜಯ್ ಅಂಚನ್, ಯುನೈಟೆಡ್ ಮೀಡಿಯಾದ ಅಭಿಷೇಕ್ ಹಾಗೂ ಸಂಚಾರಿ ಸ್ಟೂಡಿಯೋದ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ.
ಧರ್ಮಸ್ಥಳದ ವಿರೋಧ ವರದಿ ಮಾಡುತ್ತಿದ್ದೀರಿ ಎಂಬ ಕಾರಣಕ್ಕೆ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ. ಸದ್ಯ ಗಾಯಾಳುಗಳನ್ನು ಉಜಿರೆಯ ಬೆನಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಸ್ಥಳದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣಗೊಂಡಿದೆ.