Latestದಕ್ಷಿಣ ಕನ್ನಡ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಗಸ್ಟ್ 15 ರಿಂದ ಪ್ಲಾಸ್ಟಿಕ್ ನಿಷೇಧ:

410

ನ್ಯೂಸ್ ನಾಟೌಟ್ :ಮಹತೋಭಾರ ಕುಕ್ಕೆ ಶ್ರೀ
ಸುಬ್ರಹ್ಮಣ್ಯ ದೇವಳದಲ್ಲಿ ಸರಕಾರದ ಆದೇಶದಂತೆ ಮತ್ತು ರಾಜ್ಯ
ಧಾರ್ಮಿಕ ದತ್ತಿ ಆಯುಕ್ತರ ಸುತ್ತೋಲೆ ಪ್ರಕಾರ ಆ.15ರಿಂದ
ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧದ ದಿಟ್ಟ ಹೆಜ್ಜೆ ಇಡಲಾಗಿದೆ.

ಈ ಮೂಲಕ ನಮ್ಮ ನಡೆ ಪ್ಲಾಸ್ಟಿಕ್ ಮುಕ್ತದೆಡೆ ಅಭಿಯಾನಕ್ಕೆ ಪುಣ್ಯಕ್ಷೇತ್ರದಲ್ಲಿ ಚಾಲನೆ ನೀಡಲಾಗುವುದು ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್. ಎಸ್. ಇಂಜಾಡಿ ಮತ್ತು ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ತಿಳಿಸಿದ್ದಾರೆ

ಆರೋಗ್ಯಕ್ಕೆ ಮಾರಕವಾದ ಪ್ಲಾಸ್ಟಿಕ್ ಬಳಕೆ ಮಾಡದೆ ನಿರ್ಬಂಧಿಸುವ ಈ ಮಹೋನ್ನತ ಕಾರ್ಯಕ್ಕೆ ಸರ್ವಭಕ್ತರು ಮತ್ತು ಸಾರ್ವಜನಿಕರು ಸರ್ವ ರೀತಿಯ ಸಹಕಾರ ನೀಡಿ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆ ಹತ್ತಿಕ್ಕಲು ದೇವಳದೊಂದಿಗೆ ಕೈ ಜೋಡಿಸಬೇಕೆಂದು ವಿನಂತಿಸಿದ್ದಾರೆ.

ಕರ್ನಾಟಕ ಸರಕಾರ ಅಧಿಸೂಚನೆಯಂತೆ ಧಾರ್ಮಿಕ ದತ್ತಿ ಇಲಾಖಾ
ವ್ಯಾಪ್ತಿಯ ದೇವಸ್ಥಾನಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳ
ಉತ್ಪಾದನೆ ಸಂಗ್ರಹಣಿ, ವಿತರಣೆ, ಮಾರಾಟ ಮತ್ತು ಬಳಕೆಯನ್ನು
ಕಡ್ಡಯವಾಗಿ ಆ.15ರಿಂದ ನಿಷೇಧಿಸಲಾಗುತ್ತದೆ.ದೇವಸ್ಥಾನಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ರೀತಿಯ ಪ್ಲಾಸ್ಟಿಕ್ ಸಾಮಾಗ್ರಿಗಳ ಬಳಕೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇನ್ನು ದೇವಳದ ಪರಿಸರದ ಅಂಗಡಿಗಳಲ್ಲಿ, ವಾಣಿಜ್ಯ ಸಂಕೀರ್ಣಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್‌ಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ,ಮಾರಾಟ ಮತ್ತು ಬಳಕೆಯನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗುತ್ತದೆ.ಬಳಕೆ ಕಂಡು ಬಂದಲ್ಲಿ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಕಾಯ್ದೆಗಳ ಪ್ರಕಾರ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

 

 

See also  ಸುಳ್ಯದ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಣೆ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಹಲವು ನಾಯಕರು ಭಾಗಿ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget