Latestರಾಜ್ಯವೈರಲ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯದ ಆದಾಯದಲ್ಲಿ ದಾಖಲೆಯ ಏರಿಕೆ, ರಾಜ್ಯದ ಶ್ರೀಮಂತ ದೇಗುಲ ಎಂಬ ಹೆಗ್ಗಳಿಕೆ..! ಎರಡು ಮತ್ತು ಮೂರನೇ ಸ್ಥಾನ ಯಾವ ದೇವಸ್ಥಾನಕ್ಕೆ..?

594

ನ್ಯೂಸ್ ನಾಟೌಟ್: ಕರ್ನಾಟಕದ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ದಾಖಲೆಯ ಹೆಚ್ಚಳವಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ.

ಕಳೆದ ವರ್ಷ ವಾರ್ಷಿಕ ಆದಾಯ 146.01 ಕೋಟಿ ರೂ. ಆಗಿತ್ತು. ಅಂದರೆ ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಏರಿಕೆ ಆಗಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ರಾಜ್ಯದ ಶ್ರೀಮಂತ ದೇವಸ್ಥಾನ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.

ವರ್ಷದಿಂದ ವರ್ಷಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರಿ ಹೆಚ್ಚಳವಾಗುತ್ತಿದೆ. ಕಳೆದ ವರ್ಷವೂ ಪ್ರಥಮ ಸ್ಥಾನದಲ್ಲಿತ್ತು. ಈ ಭಾರಿ ಕೂಡ ವಾರ್ಷಿಕ ಆದಾಯದಲ್ಲಿ ಏರಿಕೆಯಿಂದಾಗಿ ಮತ್ತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತನ್ನ ಪ್ರಥಮ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ನಾಗಾರಾಧನೆಯ ಪ್ರಮುಖ ಕ್ಷೇತ್ರವಾಗಿದ್ದು, ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಂದಲೂ ನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಸರ್ಪ ಸಂಸ್ಕಾರ ಸೇರಿದಂತೆ ವಿವಿಧ ಸೇವೆ ಹಾಗೂ ಇತರ ಮೂಲಗಳಿಂದ ಒಟ್ಟು 155.95 ಕೋಟಿ ರೂ ಆದಾಯವಾಗಿದೆ. ದೇವಸ್ಥಾನದ ಒಟ್ಟು ಖರ್ಚು 79.82 ಕೋಟಿ ರೂ. ಎಂದು ವರದಿ ತಿಳಿಸಿದೆ.

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ದೇವಸ್ಥಾನ ಎರಡನೇ ಸ್ಥಾನದಲ್ಲಿದೆ. ಈ ದೇವಸ್ಥಾನದ ಆದಾಯ 31 ಕೋಟಿ ರೂ. ಅದೇ ರೀತಿಯಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನವು 20 ಕೋಟಿ ರೂ.ಗಳ ಅಂದಾಜು ಆದಾಯದೊಂದಿಗೆ ಮೂರನೇ ಸ್ಥಾನದಲ್ಲಿದೆ.

ಇನ್ನು ಮುಂದೆ ಚಲಿಸುವ ಟ್ರೈನ್​ ನಲ್ಲೂ ಹಣ ಡ್ರಾ ಮಾಡಬಹುದು..! ರೈಲ್ವೆ ಇಲಾಖೆಯಿಂದ ಹೊಸ ಪ್ರಯೋಗ..!

See also  ತೆಂಗಿನ ಮರ ಏರಿ ಕುಳಿತ ಕಿರಿಕ್ ಪಾರ್ಟಿ ಚಿತ್ರದ ನಟಿ..! ಏನಿದು ವೈರಲ್ ಫೋಟೋ..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget