ನ್ಯೂಸ್ ನಾಟೌಟ್ : ೧೪೪ ವರ್ಷಗಳಿಗೊಮ್ಮ ನಡೆಯುವ ಮಹಾ ಕುಂಭ ಮೇಳಕ್ಕೆ ತೆರಳಿ ಅಲ್ಲಿ ಭಾಗವಹಿಸಬೇಕೆಂಬುದು ಪ್ರತಿಯೊಬ್ಬ ಹಿಂದೂ ಭಕ್ತರ ಬಯಕೆ.ಇದೀಗ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಮುಕ್ತಾಯವಾಗಲು ಇನ್ನೇನು 13 ದಿನಗಳು ಬಾಕಿ ಉಳಿದಿವೆ. ಈವರೆಗೂ ಅಂದಾಜು 45 ಕೋಟಿ ಮಂದಿ ಮಹಾಕುಂಭ ಮೇಳದಲ್ಲಿ ಅಮೃತಸ್ನಾನ ಮಾಡಿದ್ದಾರೆ. ಉತ್ತರ ಭಾರತದ ಮಂದಿಗೆ ಪ್ರಯಾಗ್‌ರಾಜ್ ಹತ್ತಿರವಾದರೂ ದಕ್ಷಿಣ ಭಾರತದ ಮಂದಿಗೆ ಅಷ್ಟು ದೂರದ ಪ್ರಯಾಣ ಮಾಡುವುದು ಸುಲಭವಲ್ಲ.ಇನ್ನು ಮುಂದೆ ನಿಮ್ಮ ಪ್ರಯಾಣ ಸುಲಭವಾಗಲಿದೆ..
ಅರೆ! ವಿಮಾನದ ಟಿಕೆಟ್‌ಗಳು ಗಗನಕ್ಕೇರಿವೆ.ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡೇ ರಾಜ್ಯದ ಕರಾವಳಿ ಭಾಗದಿಂದ ಕುಂಭಮೇಳಕ್ಕೆ ತೆರಳುವ ಯಾತ್ರಾರ್ಥಿಗಳಿಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡು ಈ ಮಾಹಿತಿ ನೀಡಿದ್ದಾರೆ. ಫೆ.17ನೇ ತಾರೀಖು ಮಧ್ಯಾಹ್ನ 12.30ಗೆ ಉಡುಪಿಯಿಂದ ಹೊರಟ ರೈಲು 19ನೇ ತಾರೀಖಿನಂದು ಬೆಳಿಗ್ಗೆ 6.30ಗಂಟೆಗೆ ಪ್ರಯಾಗ್ ರಾಜ್ ತಲುಪಲಿದೆ. ಹಾಗೂ ಮಾರನೇ ದಿನ 20ನೇ ತಾರೀಖಿನಂದು ಸಂಜೆ 6.30ಗಂಟೆಗೆ ಪ್ರಯಾಗ್ ರಾಜ್ ನಿಂದ ಹೊರಟು 22ರಂದು ಉಡುಪಿ ತಲುಪಲಿದೆ. ಈ ರೈಲಿನಲ್ಲಿ ತೆರಳುವ ಪ್ರಯಾಣಿಕರಿಗೆ ಟಿಕೆಟ್ ವಿವರವನ್ನು ಶೀಘ್ರದಲ್ಲೇ ತಿಳಿಸಲಾಗುವುದು. ಪ್ರಯಾಗ್‌ರಾಜ್ ತೆರಳಲಿರುವ ಯಾತ್ರಾರ್ಥಿಗಳು ಸಿದ್ಧತೆಗಳನ್ನು ಮಾಡಿಕೊಳ್ಳಿ. ಗೌರವಾನ್ವಿತ ಕೇಂದ್ರ ರೈಲ್ವೆ ಸಚಿವರ ಮೌಖಿಕ ಸೂಚನೆಯ ಮೇರೆಗೆ ಈ ವಿಚಾರವನ್ನು ತಮಗೆಲ್ಲರಿಗೂ ತಿಳಿಸಲು ಹರ್ಷಿಸುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ.