Latestಕ್ರೈಂದೇಶ-ವಿದೇಶ

ಕುಂಭಮೇಳಕ್ಕೆ ಹೋಗಿದ್ದ ಕರ್ನಾಟಕ ಮೂಲದ 6 ಮಂದಿ ಸಾವು..! ಒಂದೇ ಗಾಡಿಯಲ್ಲಿ ತೆರಳಿದ್ದ 12 ಜನ..!

795

ನ್ಯೂಸ್ ನಾಟೌಟ್: ಪ್ರಯಾಗ್‌ ರಾಜ್‌ ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ ಒಂದೇ ಕುಟುಂಬದ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದೆ.
ಲಾರಿ ಮತ್ತು ಕ್ರೂಸರ್‌ ನಡುವೆ ಇಂದು(ಫೆ.21) ಬೆಳಗ್ಗೆ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ಅಪಘಾತ ಸಂಭವಿಸಿದೆ. 6 ಸಾವನ್ನಪ್ಪಿದ್ದು ಉಳಿದವರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳಾದ ಸುನೀತಾ(35) ಸಂತೋಷ್‌ (43) ನೀಲಮ್ಮ (60) ಸೇರಿದಂತೆ ಆರು ಜನ ಸಾವನ್ನಪ್ಪಿದ್ದಾರೆ. ಒಂದೇ ಗಾಡಿಯಲ್ಲಿ ಒಟ್ಟು 12 ಜನ ಕುಂಭ ಮೇಳಕ್ಕೆ ತೆರಳಿದ್ದರು. ಪುಣ್ಯ ಸ್ನಾನ ಮಾಡಿದ ಬಳಿಕ ಪ್ರಯಾಗ್‌ರಾಜ್‌ನಿಂದ ಕಾಶಿ ಕಡೆಗೆ ಕ್ರೂಸರ್‌ನಲ್ಲಿ ತೆರಳುತ್ತಿದ್ದರು. ಇಂದು(ಫೆ.21) ಬೆಳಗ್ಗೆ ಕಾಶಿಯಿಂದ 20 ಕಿಲೋ‌ ಮೀಟರ್‌ ದೂರದಲ್ಲಿ ಲಾರಿಗೆ ಹಿಂದಿನಿಂದ ಕ್ರೂಸರ್‌ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಉಳಿದವರ ಸ್ಥಿತಿ ಗಂಭೀರವಾಗಿದೆ.

ಇದನ್ನೂ ಓದಿ: ಐಎಎಸ್ ಅಧಿಕಾರಿ ಪೋಸ್ಟ್‌ ಗೆ ಕಮೆಂಟ್ ಮಾಡಿದ್ದಕ್ಕೆ ಕೇಸ್..! ಸಾಮಾಜಿಕ ಜಾಲತಾಣದಲ್ಲಿ ಮಾತಿನ ಚಕಮಕಿ..!

ಗಾಯಗೊಂಡವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.

See also  ಮಡಿಕೇರಿ: ಡ್ರಗ್ಸ್ ಬಂದಿದೆ ಎಂದು ಕಾಫಿ ಬೆಳೆಗಾರನ ಹೆದರಿಸಿ 2.20 ಕೋಟಿ ರೂ. ದೋಚಿದ ಸೈಬರ್ ಕಳ್ಳರು..!, ಕೋಟಿ..ಕೋಟಿ ಕಳೆದುಕೊಂಡು ಕಂಗಾಲಾದ ವೃದ್ದ
  Ad Widget   Ad Widget   Ad Widget   Ad Widget   Ad Widget   Ad Widget   Ad Widget