ನ್ಯೂಸ್ ನಾಟೌಟ್: ದ್ವಿಚಕ್ರ ವಾಹನವೊಂದು ಪುತ್ತೂರಿನ ಕುಂಬ್ರ ಸಮೀಪದ ಶೇಖಮಲೆ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ಜನವರಿ 27ರಂದು ಶನಿವಾರ ರಾತ್ರಿ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಬೈಕ್ ಸವಾರರಿಗೆ ಗಂಭೀರವಾಗಿ ಗಾಯವಾಗಿದೆ. ಬೈಕ್ ಕೂಡ ಜಖಂಗೊಂಡಿದೆ. ಸ್ಥಳದಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೇಗದಿಂದ ಬಂದ ಬೈಕ್ ನಿಯಂತ್ರಣ ತಪ್ಪಿ ಸೇತುವೆಗೆ ಗುದ್ದಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.