ಮೈರೋಳ್ತಡ್ಕ: ಕುರಾಯ ಸದಾಶಿವ ದೇವಸ್ಥಾನದಲ್ಲಿ ದೇವರ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಶ್ರಮದಾನ ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು, ಸೇವಾ ಪ್ರತಿನಿಧಿ ಚಂದ್ರಕಲಾ ಹಾಗೂ ಊರವರು ಪಾಲ್ಗೊಂಡಿದ್ದರು.