Latestಕರಾವಳಿಡಾಕ್ಟರ್ಸ್ ಕಾರ್ನರ್/ Doctor's Cornerಸುಳ್ಯ

ಸುಳ್ಯ:ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಅಂತಿಮ ವರ್ಷದ ಸ್ನಾತಕೋತ್ತರ ವಿಭಾಗದ ಫಲಿತಾಂಶ ಪ್ರಕಟ: ಶೇಕಡಾ 100 ಫಲಿತಾಂಶ ದಾಖಲು

819

ನ್ಯೂಸ್ ನಾಟೌಟ್ :ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕರ್ನಾಟಕ ಬೆಂಗಳೂರು ಮಾರ್ಚ್ 2025 ರಲ್ಲಿ ನಡೆಸಿದ ಅಂತಿಮ ವರ್ಷದ ಸ್ನಾತಕೋತರ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು, ಕೆವಿಜಿ ಆಯುರ್ವೇದ ವೈದ್ಯಕೀಯ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 15 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ.

ಅಂತಿಮ ವರ್ಷದ ಸ್ನಾತಕೋತ್ತರ ವಿಭಾಗದಲ್ಲಿ 18 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು , ಡಾ. ಧನ್ಯಶ್ರೀ ಯು. ಬಿ. ಹಾಗೂ ಡಾ. ಪ್ರಿಯ ಪಿ. ವಿಶಿಷ್ಟ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ.ವಿದ್ಯಾರ್ಥಿಗಳನ್ನು ಹಾಗೂ ಉಪನ್ಯಾಸಕರನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷ ಡಾ. ಕೆ. ವಿ ಚಿದಾನಂದ, ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ. ಸಿ., ಉಪಾಧ್ಯಕ್ಷೆ ಶೋಭಾ ಚಿದಾನಂದ, ಕಾರ್ಯದರ್ಶಿ ಡಾ. ಐಶ್ವರ್ಯ ಕೆ ಸಿ., ಜೊತೆ ಕಾರ್ಯದರ್ಶಿ ಹೇಮನಾಥ್ ಕೆ. ವಿ., ಕೋಶಾಧಿಕಾರಿ ಡಾ. ಗೌತಮ್ ಗೌಡ, ಕೌನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆ, ಮೀನಾಕ್ಷಿ ಕೆ. ಹೆಚ್., ಧನಂಜಯ ಮದುವೆಗದ್ದೆ ಹಾಗೂ ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾಧರ್ ಡಿ. ವಿ. ಯವರು ಅಭಿನಂದಿಸಿದ್ದಾರೆ.

See also  ದ.ಕ. ಜಿಲ್ಲಾ ಸರಕಾರಿ ನೌಕರರ ಸಂಘದ ಚುನಾವಣೆ ಅಸಿಂಧು, ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದ ಮೇಲ್ಮನವಿ ನ್ಯಾಯಾಲಯ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget