ಸುಳ್ಯ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

1k

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಗಸ್ಟ್ 15ರಂದು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ.ಕೆ.ವಿ.ಚಿದಾನಂದ ಇವರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಸಂದೇಶ ಸಾರಿದರು. ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಸುಳ್ಯ ಇದರ ಕೋಶಾಧಿಕಾರಿ ಶ್ರೀಮತಿ ಶೋಭಾ ಚಿದಾನಂದ, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಇದರ ಎಕ್ಸಿಕ್ಯೂಟಿವ್ ಡೈರೆಕ್ಟರ್ ಮಿ. ಅಕ್ಷಯ್ ಕೆ.ಸಿ., ಡೈರೆಕ್ಟರ್ ಡಾ.ಐಶ್ವರ್ಯ ಕೆ.ಸಿ., ಕೆವಿಜಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲರಾದ ಡಾ.ಲೀಲಾಧರ್ ಡಿ.ವಿ.,  ಎನ್.ಎಸ್. ಎಸ್. ಘಟಕದ ಅಧಿಕಾರಿ ಡಾ.ಪ್ರಮೋದ್ ಪಿ.ಎ., ಹಾಗೂ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು, ಪದವಿ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು, ಕಲಿಕಾ ವೈದ್ಯರು, ಹಾಗೂ ಎನ್.ಎಸ್. ಎಸ್ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

See also  ಕಲ್ಲುಗುಂಡಿ : ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಪೂರ್ವ ತಯಾರಿ ಸಭೆ,ಆಮಂತ್ರಣ ಪತ್ರಿಕೆ ಬಿಡುಗಡೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget