Latestಕೆವಿಜಿ ಕ್ಯಾಂಪಸ್‌

ಸುಳ್ಯ: ಕೆವಿಜಿ ಕಾನೂನು ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಪ್ರಾರಂಭೋತ್ಸವ

167

ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಕಾನೂನು ಕಾಲೇಜಿನಲ್ಲಿ 2025- 26ನೇ ಸಾಲಿನ 5ನೇ ವರ್ಷದ ಪ್ರಥಮ ಬಿಎ ಎಲ್ ಎಲ್ ಬಿ ನೂತನ ವಿದ್ಯಾರ್ಥಿಗಳಿಗೆ ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮ ಗುರುವಾರ (ಆ.14 ) ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ) ಸುಳ್ಯ ಇದರ ಅಧ್ಯಕ್ಷ ಡಾ. ಕೆ ವಿ ಚಿದಾನಂದ, ವಿದ್ಯಾರ್ಥಿಗಳು ಆಧುನಿಕ ಸವಲತ್ತುಗಳನ್ನು ಉಪಯೋಗಿಸಿಕೊಂಡು ಕಾನೂನಿನಲ್ಲಾಗುವ ಬದಲಾವಣೆಗಳಿಗೆ ಹೊಂದಿಕೊಂಡು ಪರಿಣತಿ ಪಡೆದುಕೊಳ್ಳಲು ಕರೆ ನೀಡಿದರು.

ಕಾಲೇಜಿನ ಪ್ರಾoಶುಪಾಲೆ ಟೀನಾ ಎಚ್ ಎಸ್ ಪ್ರಾಸ್ತಾವಿಕ ಮಾತನಾಡಿದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಕೆ.ವಿ. ಹೇಮನಾಥ ಅವರು ಹಿತನುಡಿಗಳನ್ನಾಡಿದರು.

ಕಾಲೇಜಿನ ಆಡಳಿತಾಧಿಕಾರಿ ಪ್ರೊ. ಕೆ.ವಿ. ದಾಮೋದರ ಗೌಡ ಮಾತನಾಡಿ, ವಿದ್ಯಾರ್ಥಿಗಳು ಸಮಯಪಾಲನೆ, ಶಿಸ್ತು ಮತ್ತು ಕರ್ತವ್ಯಪ್ರಜ್ಞೆ ಮೈಗೂಡಿಸಿಕೊಳ್ಳಲು ಸಲಹೆ ನೀಡಿದರು. ಉಪನ್ಯಾಸಕಿ ರಚನಾ ಕೆ. ಕಾಲೇಜಿನ ವಿವಿಧ ಸಮಿತಿಗಳು ಮತ್ತು ಮೌಲ್ಯಮಾಪನದ ಕುರಿತು ಉಪನ್ಯಾಸಕಿ ಸುಚಿತ್ರ ಕಾಲೇಜಿನ ನಿಯಮಗಳು, ಕೃತಿಕಾ ತರಗತಿ ಪಠ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿನಿಯರಾದ ರಮ್ಯಾ ಮತ್ತು ಚಂದನ ಪ್ರಾರ್ಥಿಸಿದರು. ಉಪನ್ಯಾಸಕಿ ಕಲಾವತಿ ಎಂ.ಸ್ವಾಗತಿಸಿ, ನಯನ ಪಿಯು ವಂದಿಸಿದರು. ಉಪನ್ಯಾಸಕಿ ರಶ್ಮಿ ಎಚ್ ಕಾರ್ಯಕ್ರಮ ನಿರೂಪಿಸಿದರು.

See also  ಸುಹಾಸ್ ಶೆಟ್ಟಿ ಹತ್ಯೆಗೂ ಮುನ್ನ ಕಳಸದ ರೆಸಾರ್ಟ್‌ವೊಂದರಲ್ಲಿ ಭರ್ಜರಿ ಪಾರ್ಟಿ ಮಾಡಿರುವ ಆರೋಪಿಗಳು?!ಹತ್ಯೆಗೆ ಸ್ಕೆಚ್ ರೂಪಿಸಲೆಂದೇ ಪಾರ್ಟಿ ಮಾಡಿದರೇ?
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget