ಕೆವಿಜಿ ಕ್ಯಾಂಪಸ್‌

ಸುಳ್ಯ: ಕೆ.ವಿ.ಜಿ. ಕಾನೂನು ಮಹಾ ವಿದ್ಯಾಲಯದಲ್ಲಿ 2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟ

ನ್ಯೂಸ್ ನಾಟೌಟ್ : ಕೆವಿಜಿ ಕಾನೂನು ಕಾಲೇಜಿನ 2024-25ನೇ ಸಾಲಿನ ವಾರ್ಷಿಕ ಕ್ರೀಡೋತ್ಸವ ಡಿ.17 ಮತ್ತು 18ರಂದು ಆಯೋಜಿಸಲಾಯಿತು. ಬೆಳ್ಳಾರೆ ಸರಕಾರಿ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ| ರಾಮಚಂದ್ರ ಕೆ. ಕ್ರೀಡೋತ್ಸವ ನೆರವೇರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕೆವಿಜಿ ಕಾನೂನು ಕಾಲೇಜಿನ ಶೈಕ್ಷಣಿಕ ಸಲಹೆಗಾರ. ಕೆ.ವಿ. ಹೇಮನಾಥ ವಹಿಸಿದ್ದರು. ಕಾಲೇಜಿನ ಆಡಳಿತಧಿಕಾರಿ ಪ್ರೊ. ಕೆ.ವಿ. ದಾಮೋದರ ಗೌಡ, ಕಾಲೇಜಿನ ಪ್ರಾಂಶುಪಾಲ ಡಾ. ಉದಯಕೃಷ್ಣ ಬಿ, ವಿದ್ಯಾರ್ಥಿ ಕ್ಷೇಮಾಧಿಕಾರಿ, ಪ್ರೊ. ಟೀನಾ ಎಚ್‌. ಎಸ್, ಕಾನೂನು ಕಾಲೇಜಿನ ಕಚೇರಿ ಅಧೀಕ್ಷಕಿ ಕೌಸಲ್ಯ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ರಮ್ಯಾ ಪ್ರಾರ್ಥಿಸಿ, ಪ್ರಾಂಶುಪಾಲ ಡಾ. ಉದಯಕೃಷ್ಣ ಬಿ. ಸ್ವಾಗತಿಸಿದರು. ವಿದ್ಯಾರ್ಥಿನಿ ವಿದ್ಯಾಶ್ರೀ ವಂದಿಸಿದರು. ಕಾಲೇಜಿನ ಕ್ರೀಡಾ ಕಾರ್ಯದರ್ಶಿ ಪೂರ್ಣೇಶ್ ಪ್ರಮಾನವಚನ ಬೋಧಿಸಿದರು. ವಿದ್ಯಾರ್ಥಿನಿಯರಾದ ಯಶಸ್ವಿನಿ ಹಾಗೂ ಕೀರ್ತನ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರು, ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಸಾಹಿತ್ಯಿಕ ಸ್ಪರ್ಧೆ ಸುಕೃತಾ-2024

ಸುಳ್ಯ: ಎನ್ನೆಂಸಿಯ ಯುವ ರೆಡ್‌ಕ್ರಾಸ್ ಘಟಕದಿಂದ ರಸ್ತೆ ಸುರಕ್ಷತಾ ಮತ್ತು ಮಾದಕ ವ್ಯಸನ ಜಾಗೃತಿ ಮಾಹಿತಿ ಕಾರ್ಯಾಗಾರ

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ