ಕರಾವಳಿ

ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ, ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ AOLE(R) ಅಧ್ಯಕ್ಷ ಡಾ| ಕೆ.ವಿ ಚಿದಾನಂದ

ನ್ಯೂಸ್ ನಾಟೌಟ್: ಜೂ.14 ವಿಶ್ವ ರಕ್ತದಾನಿಗಳ ದಿನ. ಈ ಹಿನ್ನೆಲೆಯಲ್ಲಿ ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನವನ್ನು ರಕ್ತದಾನದ ಮೂಲಕ ವಿಶೇಷವಾಗಿ ಆಚರಿಸಲಾಯಿತು. ಕಾಲೇಜಿ ನಲ್ಲಿ ಕಾರ್ಯಕ್ರಮ ನೆರವೇರಿತು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ| ಕೆ.ವಿ ಚಿದಾನಂದ ಅವರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ‘ರಕ್ತದಾನದ ಮಹತ್ವವನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕಿದೆ. ಇನ್ನೊಂದು ಜೀವವನ್ನು ಉಳಿಸುವುದರಲ್ಲಿ ರಕ್ತದಾನದ ಪಾತ್ರ ಅತ್ಯಂತ ಮಹತ್ತರವಾದುದು. ಹೀಗಾಗಿ ರಕ್ತದಾನವನ್ನು ಕಾಲಕಾಲಕ್ಕೆ ಆರೋಗ್ಯವಂತ ಯುವ ಸಮುದಾಯ ಮಾಡಬೇಕಿದೆ’ ಎಂದು ಕಿವಿ ಮಾತು ಹೇಳಿದರು.

ಪೆತಾಲಜಿ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ| ಅಂಜಲಿ ರಾವ್ ಪಿಪಿಟಿ ಪ್ರೆಸಂಟೇಷನ್ ಮೂಲಕ ರಕ್ತದಾನದ ದಿನದ ಮಹತ್ವವನ್ನು ವಿವರಿಸಿದರು. ಪೆತಾಲಜಿ ವಿಭಾಗದ ಪ್ರಾಧ್ಯಾಪಕರು ಹಾಗೂ ಬ್ಲಡ್ ಸೆಂಟರ್ ಆಫೀಸರ್ ಆಗಿರುವ ಡಾ | ನವ್ಯ ಬಿ.ಎನ್ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಲಭ್ಯವಿರುವ ಅತ್ಯಾಧುನಿಕ ಗುಣಮಟ್ಟದ ಬ್ಲಡ್ ಸೆಂಟರ್ ಬಗೆಗಿನ ಮಾಹಿತಿ ನೀಡಿದರು. ಇದೇ ವೇಳೆ 20ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ ದಾನಿಗಳನ್ನು ಸನ್ಮಾನಿಸಲಾಯಿತು.

ಕೆವಿಜಿ ಕಾನೂನು ಮಹಾವಿದ್ಯಾಲಯದ ಉಪನ್ಯಾಸಕಿ ಅರ್ಚನಾ, ಕೆವಿಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಡಾ|ಲಕ್ಷ್ಮೀಶ ಉಪಸ್ಥಿತರಿದ್ದರು. ಪೆತಾಲಜಿ ವಿಭಾಗ ಮುಖ್ಯಸ್ಥರು ಡಾ| ಸತ್ಯವತಿ ಆರ್. ಆಳ್ವ ಸ್ವಾಗತಿಸಿದರು. ಪೆತಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ| ದಿಶಾ ಕಾರ್ಯಕ್ರಮ ನಿರೂಪಿಸಿದರು. ಪೆತಾಲಜಿ ವಿಭಾಗದ ಪ್ರಧ್ಯಾಪಕರು ಡಾ| ಭಾರತಿ. ಎಮ್ ವಂದಿಸಿದರು. ವಿದ್ಯಾರ್ಥಿನಿ ಅಕ್ಷಿತಾ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗದ ಮುಖ್ಯಸ್ಥರು ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ಕಾಲೇಜಿನ ಸಿಬ್ಬಂದಿ ಉಪಸ್ಥಿತರಿದ್ದರು. ಬ್ಲಡ್ ಸೆಂಟರ್ ನಲ್ಲಿ ರಕ್ತದಾನ ಶಿಬಿರ ನೆರವೇರಲಿದೆ.

Related posts

ಬೆದ್ರೋಡಿ: ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು

ಸುಳ್ಯ :ಅಡ್ಕಾರು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿಷ್ಠಾ ದಿನ,ವರ್ಷಾವಧಿ ಜಾತ್ರೋತ್ಸವ ಸಂಭ್ರಮ..;3 ದಿನಗಳ ಕಾಲ ನಡೆಯಲಿರುವ ಅದ್ದೂರಿ ಜಾತ್ರೋತ್ಸವ ಕಾರ್ಯಕ್ರಮದ ಸಂಪೂರ್ಣ ವಿವರ ಇಲ್ಲಿದೆ ಓದಿ..

ಮಂಗಳೂರು: ಪೌರತ್ವ ಪ್ರತಿಭಟನೆ, ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರಲ್ಲ: ಹೈಕೋರ್ಟ್