ಕರಾವಳಿಶಿಕ್ಷಣಸುಳ್ಯ

ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ವಿಜ್ಞಾನ ದಿನಾಚರಣೆ: ವಿಜ್ಞಾನ ಮಾದರಿಗಳ ಪ್ರದರ್ಶನ

192

ನ್ಯೂಸ್ ನಾಟೌಟ್ : ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ವಿಜ್ಞಾನ ದಿನಾಚರಣೆಯನ್ನು ಫೆ.28 ಮಂಗಳವಾರದಂದು ಆಚರಿಸಲಾಯಿತು.

ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ವಿಜ್ಞಾನ ಮಾದರಿಗಳನ್ನು ಪ್ರದರ್ಶನ ಮಾಡಿದರು. ಇದರ ಜೊತೆಗೆ ವಿದ್ಯಾರ್ಥಿಗಳು ದಿನನಿತ್ಯದ ಚಟುವಟಿಕೆಗಳಲ್ಲಿ ವಿಜ್ಞಾನದ ಮಹತ್ವವನ್ನು ತಿಳಿಸಿದರು.

ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ ವಿ ಹಾಗೂ ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ಹಾಗೂ ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿಜ್ಞಾನ ವಿಭಾಗದ ಉಪನ್ಯಾಸಕರಾದ ಭವ್ಯ, ರಂಜಿತ್ ಹಾಗೂ ವಿದ್ಯಾಶ್ರೀ ನಿರೂಪಿಸಿದರು.

See also  ಉಡುಪಿ: ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ತಿರುವು! ಧ್ವನಿ ಎತ್ತಿದ ವಿದ್ಯಾರ್ಥಿನಿಗೆ ಬೆದರಿಕೆ ಸಂದೇಶ ಕಳಿಸಿದ್ಯಾರು?
  Ad Widget   Ad Widget   Ad Widget   Ad Widget   Ad Widget   Ad Widget