Latestಬೆಂಗಳೂರುರಾಜಕೀಯ

ಗೃಹಲಕ್ಷ್ಮಿ ಯೋಜನೆಯ ಹಣ ಬಾಕಿ ಕುರಿತು ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ, 3 ತಿಂಗಳ ಹಣ ಒಮ್ಮೆಲೆ ಖಾತೆಗೆ ಹಾಕುವ ಬಗ್ಗೆ ಸಚಿವೆ ಹೇಳಿಕೆ..!

1.4k

ನ್ಯೂಸ್ ನಾಟೌಟ್: ಕಾಂಗ್ರೆಸ್ ಸರ್ಕಾರದ ಪ್ರಮುಖ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಹಣ ಕಳೆದ ಮೂರು ತಿಂಗಳಿನಿಂದ ಬಿಡುಗಡೆಯಾಗದ ಹಿನ್ನೆಲೆ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂದು ಸರ್ಕಾರಕ್ಕೆ ಹಲವರು ಪ್ರಶ್ನಿಸಿದ್ದರು. ಇದೀಗ ಗೃಹ ಲಕ್ಷ್ಮಿ ಹಣ ಬಿಡುಗಡೆ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಮುಂದಿನ 8-10 ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇನ್ನೂ 8-10 ದಿನಗಳಲ್ಲಿ ಗೃಹ ಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಲಾಗುವುದು. ನನಗೆ ಅಪಘಾತವಾಗಿ 40 ದಿನ ಆಸ್ಪತ್ರೆಯಲ್ಲಿ ಇದ್ದ ಕಾರಣ ಗೃಹ ಲಕ್ಷ್ಮಿ ಹಣ ಖಾತೆಗೆ ಹಾಕುವ ಪ್ರಕ್ರಿಯೆ ವಿಳಂಬವಾಗಿದೆ. ಇಷ್ಟು ದಿನ ವಿಳಂಬವಾಗಿದ್ದ ಹಣವನ್ನು 8-10 ದಿನದೊಳಗೆ ಮಹಿಳೆಯರ ಖಾತೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಗೃಹ ಲಕ್ಷ್ಮಿ ಹಣವನ್ನು ಹೊಸ ಪ್ಯಾಟರ್ನ್ ಮೂಲಕ ಹಾಕಲಾಗುತ್ತಿದೆ. ಬೆಂಗಳೂರು ಸುತ್ತಮುತ್ತಲ 5 ತಾಲೂಕು ಪಂಚಾಯಿತಿಗಳಿಗೆ ದುಡ್ಡು ಹಾಕಿದ್ದೇವೆ. ಅಲ್ಲಿಂದ ಸಿಡಿಪಿಒ ಮೂಲಕ ಹಣ ಬಿಡುಗಡೆ ಮಾಡಲಾಗಿದೆ. ಇನ್ನೂ ಸರಿಯಾಗಿ ಒಂದು ವಾರ, 10 ದಿನದೊಳಗೆ ಗೃಹ ಲಕ್ಷ್ಮಿ ಹಣ ಬಿಡುಗಡೆ ಮಾಡಲಾಗುವುದು. ಹಣಕಾಸು ಇಲಾಖೆ ಎರಡು ತಿಂಗಳ ಹಣ ಹಾಕುವ ಬಗ್ಗೆ ಮಾಹಿತಿ ಇದೆ. ನಾನು ವಿಧಾನಮಂಡಲ ಬಜೆಟ್ ಅಧಿವೇಶನಕ್ಕೆ ಹೋಗುತ್ತಿದ್ದೇನೆ. ಅಲ್ಲಿ ಮೂರು ತಿಂಗಳ ಹಣ ಹಾಕುವ ಕೆಲಸ ಮಾಡುತ್ತೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

See also  ನಟಿ ಖುಷ್ಬೂ ಅತ್ತೆಯಿಂದ ಆಶಿರ್ವಾದ ಪಡೆದ ಮೋದಿ, ನಟಿ ಈ ಬಗ್ಗೆ ಹೇಳಿದ್ದೇನು..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget