ನ್ಯೂಸ್ ನಾಟೌಟ್ : ಕಾಂಗ್ರೆಸ್ ಶಾಸಕಾಂಗ ಸಭೆ ಮುಗಿಸಿ ವಾಪಾಸ್ ಬರುವಾಗ ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿತ್ತು. ಚಾಲಕನ ನಿಯಂತ್ರಣ ತಪ್ಪಿ ಕಾರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನು ಮತ್ತು ಮುಖಕ್ಕೆ ಸಣ್ಣಪುಟ್ಟ ಗಾಯಗಳು ಆಗಿದ್ದು, ಸದ್ಯ ಚಿಕಿತ್ಸೆಗಾಗಿ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಲಕ್ಷ್ಮಿ ಹೆಬ್ಬಾಳಕರ್ ಅವರ ಸಹೋದರ, ಗನ್‌ಮ್ಯಾನ್, ಡ್ರೈವರ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಹೆಬ್ಬಾಳ್ಕರ್ ಅವರ ಆರೋಗ್ಯ ಚೇತರಿಕೆ ಆಗ್ತಿದೆ ಎನ್ನಲಾಗಿದೆ.
ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆನ್ನಿಗೆ ಬಲವಾದ ಪೆಟ್ಟಾಗಿದ್ದು, ಇವರ ಬೆನ್ನಿನ ಎಲ್1 ಮತ್ತು ಎಲ್4 ಫ್ರಾಕ್ಚರ್ ಆಗಿರುವುದು ಧೃಡವಾಗಿದೆ. ಪೇನ್ ಕಿಲ್ಲರ್ ಕೊಟ್ಟ ಟ್ರೀಟ್ಮೆಂಟ್ ಮುಂದುವರಿಸಿದ್ದೇವೆ. ಈಗ ಸುಧಾರಿಸಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ಇನ್ನೂ 2 ದಿನ ಚಿಕಿತ್ಸೆ ನೀಡಿ ಡಿಶ್ಚಾರ್ಜ್ ಮಾಡುತ್ತೇವೆ.ಆದರೆ ಅವರು ಕನಿಷ್ಠ 1 ತಿಂಗಳು ಬೆಡ್ ರೆಸ್ಟ್ ಮಾಡಬೇಕು ಎಂದರು ಡಾ. ರವಿ ಪಾಟೀಲರು ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.