ಕ್ರೈಂಬೆಂಗಳೂರುರಾಜ್ಯವೈರಲ್ ನ್ಯೂಸ್ಸಿನಿಮಾ

ವಕೀಲರ ಮುಂದೆ ನಟ ದರ್ಶನ್ ಕಣ್ಣೀರು..! ನಾನೇನು ಮಾಡಿಲ್ಲ, ನನಗೇನು ಗೊತ್ತಿಲ್ಲ, ನನ್ನನ್ನು ಬಿಟ್ಟುಬಿಡಿ ಎಂದ ಡಿ ಬಾಸ್..!

87
Spread the love

ನ್ಯೂಸ್ ನಾಟೌಟ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ರನ್ನು ಬಂಧಿಸಿದ್ದು ಬೋರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಕೋರ್ಟ್ ಗೆ ಹಾಜರು ಪಡಿಸಲು ಕರೆದೊಯ್ಯುತ್ತಿದ್ದಾರೆ. ಈ ಮಧ್ಯೆ ದರ್ಶನ್ ರನ್ನು ವಕೀಲ ಅನಿಲ್ ಭೇಟಿ ಮಾಡಿದ್ದರು. ಈ ವೇಳೆ ದರ್ಶನ್ ನಾನೇನು ಮಾಡಿಲ್ಲ, ನನಗೇನು ಗೊತ್ತಿಲ್ಲ, ನನ್ನನ್ನು ಬಿಟ್ಟುಬಿಡಿ ಎಂದು ಅಳಲು ತೋಡಿಕೊಂಡು ವಕೀಲರ ಮುಂದೆ ಕಣ್ಣೀರು ಹಾಕದ್ದಾರೆ ಎನ್ನಲಾಗಿದೆ.

ಇದೇ ವೇಳೆ ಸಂಬಂಧಿ ಸುಶಾಂತ್ ದರ್ಶನ್ ಅವರನ್ನು ದರ್ಶನ್ ಭೇಟಿಯಾದರು. ನಂತರ ಸಂಬಂಧಿ ಫೋನ್ ಮೂಲಕ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ಮಗ ವಿನೀಶ್ ಜೊತೆ ಮಾತನಾಡಿದರು. ಪತ್ನಿಗೆ ದರ್ಶನ್ ನಾನೇನು ಮಾಡಿಲ್ಲ. ನನಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ದರ್ಶನ್ ಹೇಳಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ದರ್ಶನ್​, ಪವಿತ್ರಾ ಗೌಡ ಜೊತೆ ವಿನಯ್, ಆರ್. ನಾಗರಾಜು, ಎಂ. ಲಕ್ಷ್ಮಣ್​, ಎಸ್​. ಪ್ರದೋಶ್​, ಕೆ. ಪವನ್, ದೀಪಕ್​ ಕುಮಾರ್, ನಂದೀಶ್​, ಕಾರ್ತಿಕ್​, ನಿಖಿಲ್ ನಾಯಕ್​, ಕೇಶವಮೂರ್ತಿ, ರಾಘವೇಂದ್ರ ಅಲಿಯಾಸ್​ ರಾಘು ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸತ್ವ ಅಪಾರ್ಟ್ ಮೆಂಟ್ ಬಳಿಯ ಮೋರಿಯಲ್ಲಿ ಯುವಕನ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಪ್ರಕರಣದ ಜಾಡು ಹಿಡಿದು ತನಿಖೆ ಮಾಡುತ್ತಾ ಹೋದ ಪೊಲೀಸರಿಗೆ ಇದರಲ್ಲಿ ನಟ ದರ್ಶನ್ ಮತ್ತು ಅವರ ಸಹಚರರ ಕೊಲೆಯ ಕೈವಾಡವಿರುವುದು ಪತ್ತೆಯಾಗಿತ್ತು.

Click 👇

https://newsnotout.com/2024/06/mangaluru-daiva-temple-kannada-news-n
https://newsnotout.com/2024/06/challenging-star-darshan-arrested-in-process
https://newsnotout.com/2024/06/bike-father-sister-and-son-conflict-kannada-news
https://newsnotout.com/2024/06/kannada-news-hd-devegowda-and-narendra-modi-call
See also  ತಮಗೆ ತಾವೇ ಚಾಟಿಯಿಂದ ಹೊಡೆದುಕೊಂಡ ಮಾಜಿ ಐಪಿಎಸ್ ಅಣ್ಣಾಮಲೈ..! ಏನಿದು ಘಟನೆ..? ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget   Ad Widget   Ad Widget   Ad Widget