ಕರಾವಳಿ

ಮದ್ಯ ಮಾರಾಟ ವಯಸ್ಸಿನ ಮಿತಿ 21 ರಿಂದ 18ಕ್ಕೆ ಇಳಿಕೆ

ನ್ಯೂಸ್ ನಾಟೌಟ್ : 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ ಎಂಬ ನಿರ್ಬಂಧವನ್ನು ಸಡಿಲಿಸಲಾಗಿದೆ. ವಯಸ್ಸಿನ ಮಿತಿಯನ್ನು 18 ವರ್ಷಗಳಿಗೆ ಇಳಿಕೆ ಮಾಡಲು ಕರ್ನಾಟಕ ಅಬಕಾರಿ ಪರವಾನಗಿಗಳು (ಸಾಮಾನ್ಯ ಷರತ್ತುಗಳು) ನಿಯಮಗಳು–1967ಕ್ಕೆ ತಿದ್ದುಪಡಿ ತರಲಾಗುತ್ತಿದೆ.

ಅಬಕಾರಿ ನಿಯಮಗಳಿಗೆ ತಿದ್ದುಪಡಿ ತರಲು ಇಲಾಖೆಯು ಸಿದ್ಧಪಡಿಸಿರುವ ಕರಡು ಪ್ರತಿಯನ್ನು ಸೋಮವಾರ (ಜನವರಿ 9) ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಅಬಕಾರಿ ಪರವಾನಗಿಗಳು (ಸಾಮಾನ್ಯ ಷರತ್ತುಗಳು) ನಿಯಮಗಳು–1967ರ ಸೆಕ್ಷನ್‌ 10 (1) (ಇ) ಅಡಿಯಲ್ಲಿ ಮದ್ಯ ಖರೀದಿದಾರನ ವಯಸ್ಸಿಗೆ ವಿಧಿಸಿದ್ದ ನಿರ್ಬಂಧವನ್ನು ಸಡಿಲಿಸುವ ಉಲ್ಲೇಖ ತಿದ್ದುಪಡಿ ಕರಡಿನಲ್ಲಿದೆ. ‘21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ’ ಎಂದು ಸೆಕ್ಷನ್‌ 10 (1) (ಇ)ನಲ್ಲಿ ಹೇಳಲಾಗಿತ್ತು. ಅದನ್ನು ಬದಲಿಸಿ, ‘18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ’ ಎಂಬುದನ್ನು ಸೇರಿಸುವ ಪ್ರಸ್ತಾವ ಇದೆ.

Related posts

ಮನೆಯಂಗಳದಲ್ಲೇ ನೀವೂ ಬೆಳೆಯಬಹುದು ಕಲರ್ ..ಕಲರ್ ತಾವರೆ

ದಕ್ಷಿಣ ಕನ್ನಡ, ಕೊಡಗಿಗೆ ಭಾರಿ ಮಳೆ ಅಪ್ಪಳಿಸುವ ಸಾಧ್ಯತೆ

ರೈಲಿನಿಂದ ಬಿದ್ದು ಬಿಳಿನೆಲೆಯ ವ್ಯಕ್ತಿ ಫರಂಗಿಪೇಟೆಯಲ್ಲಿ ಸಾವು..! ಬ್ಯಾಗ್ ನೊಳಗಿತ್ತು ಮ್ಯಾರೇಜ್ ಸರ್ಟಿಫಿಕೇಟ್