ಕ್ರೀಡೆ/ಸಿನಿಮಾ

India’s squad for World Cup 2023: ಮುಂಬರುವ ವಿಶ್ವಕಪ್ ಕೂಟಕ್ಕೆ ಟೀಂ ಇಂಡಿಯಾ ತಂಡ ಪ್ರಕಟ, ಪ್ರಮುಖ ಆಟಗಾರರು ತಂಡದಿಂದ ಔಟ್..!

176

ನ್ಯೂಸ್ ನಾಟೌಟ್:  ತವರಿನಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಗೆ 15 ಸದಸ್ಯರನ್ನೊಳಗೊಂಡ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ತಂಡವನ್ನು ಪ್ರಕಟಿಸಿದೆ. ಈ ನಡುವೆ ಪ್ರಮುಖ ಆಟಗಾರರಿಗೆ ಕೊಕ್ ನೀಡಿದೆ. ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್, ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ , ಸ್ಪಿನ್ನರ್ ಯಜುವೇಂದ್ರ ಚಾಹಲ್ , ಶಿಖರ್ ಧವನ್ , ತಿಲಕ್ ವರ್ಮ, ಪ್ರಸಿದ್ಧ ಕೃಷ್ಣ, ಭುವನೇಶ್ವರ್ ಕುಮಾರ್ , ರವಿ ಬಿಷ್ಣೋಯಿ ತಂಡದಲ್ಲಿ ಸ್ಥಾನ ಪಡೆದುಕೊಳ್ಳುವಲ್ಲಿ ವಿಫಲವಾಗಿದ್ದಾರೆ.

ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಉಪನಾಯಕ ಆಗಿರಲಿದ್ದಾರೆ. ವಿರಾಟ್ ಕೊಹ್ಲಿ, ಶುಭಮನ್ ಗಿಲ್ ಜೊತೆಗೆ ಗಾಯಮುಕ್ತಗೊಂಡಿರುವ ಶ್ರೇಯಸ್ ಅಯ್ಯರ್ ಹಾಗೂ ಕೆ.ಎಲ್. ರಾಹುಲ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಶನ್ ಸಹ ತಂಡದಲ್ಲಿದ್ದಾರೆ. ಇನ್ನು ರವೀಂದ್ರ ಜಡೇಜ, ಅಕ್ಷರ್ ಪಟೇಲ್ ಹಾಗೂ ಶಾರ್ದೂಲ್ ಠಾಕೂರ್ ಸಹ ಕಾಣಿಸಿಕೊಂಡಿದ್ದಾರೆ. ಬೌಲಿಂಗ್ ವಿಭಾಗಕ್ಕೆ ಜಸ್ ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಮತ್ತು ಕುಲದೀಪ್ ಯಾದವ್ ಬಲ ತುಂಬಲಿದ್ದಾರೆ.

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ , ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ , ಇಶಾನ್ ಕಿಶನ್ , ಕೆ.ಎಲ್. ರಾಹುಲ್ , ಹಾರ್ದಿಕ್ ಪಾಂಡ್ಯ (ಉಪನಾಯಕ), ಸೂರ್ಯಕುಮಾರ್ ಯಾದವ್ , ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್

See also  ಮೈಸೂರು:ಮ್ಯೂಸಿಯಂನಲ್ಲಿ ಬಾಹುಬಲಿ ನಟ ಪ್ರಭಾಸ್ ಹೋಲುವ ಮೇಣದ ಪ್ರತಿಮೆ,ಈ ಪ್ರತಿಮೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದೇಕೆ?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget