ಲಾಕ್ ಡೌನ್ ಪ್ರಸ್ತಾವವೇ ಸರ್ಕಾರದ ಮುಂದಿಲ್ಲ; ಡಾ.ಕೆ.ಸುಧಾಕರ್ ಸ್ಪಷ್ಟನೆ

4

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಗೊಳಿಸುವ ಯಾವುದೇ ಪ್ರಸ್ತಾವ ಇಲ್ಲ. ಈ ವಿಷಯದಲ್ಲಿ ಜನರನ್ನು ಆತಂಕಕ್ಕೆ ತಳ್ಳುವ ಕೆಲಸವನ್ನು ಯಾರೂ ಮಾಡಬಾರದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ಕೆಲವು ದೇಶಗಳಲ್ಲಿ ಓಮಿಕ್ರಾನ್ ತಳಿಯ ಹೊಸ ಕೋವಿಡ್ ವೈರಾಣು ಪತ್ತೆಯಾಗಿದೆ. ಅದು ವೇಗವಾಗಿ ಹರಡುತ್ತದೆ ಎಂಬ ಮಾಹಿತಿ ಲಭಿಸಿದೆ. ಆದರೆ, ಅದೇ ಕಾರಣಕ್ಕಾಗಿ ಲಾಕ್ ಡೌನ್ ಮಾಡಲಾಗುತ್ತದೆ ಎಂಬ ವದಂತಿಯನ್ನು ಸಾಮಾಜಿಕ ಮಾಧ್ಯಮಗಳು ಅಥವಾ ಮಾಧ್ಯಮಗಳಲ್ಲಿ ಬಿತ್ತರಿಸಬಾರದು ಎಂದರು. ಕೋವಿಡ್ ನಿಂದ ಜನರು ಈಗಾಗಲೇ ಸಾಕಷ್ಟು ನೊಂದಿದ್ದಾರೆ. ಪ್ರಾಣ ಹಾನಿ, ಆರ್ಥಿಕ ನಷ್ಟ ಮತ್ತು ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂದರ್ಭದಲ್ಲಿ ಮತ್ತೆ ಜನರನ್ನು ಆತಂಕಕ್ಕೆ ಸಿಲುಕಿಸುವಂತಹ ಪ್ರಯತ್ನ ಮಾಡಬಾರದು ಎಂದು ಹೇಳಿದರು.

ಮಂಗಳವಾರ ಸಭೆ

ಈವರೆಗಿನ ಮಾಹಿತಿ ಪ್ರಕಾರ 12 ದೇಶಗಳಲ್ಲಿ ಓಮಿಕ್ರಾನ್ ತಳಿಯ ಕೋವಿಡ್ ವೈರಾಣು ಪತ್ತೆಯಾಗಿದೆ. ಈ ಕಾರಣದಿಂದ ಸಾಕಷ್ಟು ಮುನ್ನೆಚ್ಚರಿಕೆ ಅಗತ್ಯವಿದೆ. ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಲು ಮಂಗಳವಾರ ಉನ್ನತಮಟ್ಟದ ಸಭೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.

ಡೆಲ್ಟಾದಷ್ಟು ಭೀಕರವಲ್ಲ

ಓಮಿಕ್ರಾನ್ ತಳಿಯ ವೈರಾಣು ಪತ್ತೆಯಾಗಿರುವ ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನನ್ನ ವೈದ್ಯ ಸ್ನೇಹಿತರ ಜತೆ ಮಾತನಾಡಿದ್ದೇನೆ. ಅವರು ನೀಡಿದ ಮಾಹಿತಿ ಪ್ರಕಾರ, ಓಮಿಕ್ರಾನ್ ತಳಿಯ ವೈರಾಣು ಒಂಭತ್ತು ತಿಂಗಳಿಂದ ಇರುವ ಡೆಲ್ಟಾ ತಳಿಯ ವೈರಾಣುವಿನಷ್ಟು ತೀವ್ರವಾಗಿ ವರ್ತಿಸುವುದಿಲ್ಲ. ಇದು ಸೌಮ್ಯವಾಗಿ ವರ್ತಿಸುತ್ತಿರುವ ವೈರಾಣು ಎಂಬ ಮಾಹಿತಿ ಲಭಿಸಿದೆ ಎಂದು ಸುಧಾಕರ್ ತಿಳಿಸಿದರು.

Related Articles

Latestಕ್ರೈಂಬೆಂಗಳೂರು

ಮಹಿಳಾ ಎಸಿಪಿ ಜತೆ ಪೊಲೀಸ್ ಅಧಿಕಾರಿಯ ಲವ್ವಿಡವ್ವಿ..! ಪತ್ನಿಯ ಹತ್ಯೆಗೆ ಸಂಚು ರೂಪಿಸಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಕೇಸ್..!

ನ್ಯೂಸ್‌ ನಾಟೌಟ್: ಬೆಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ, ತಮ್ಮ ಪತಿ ಮಹಿಳಾ ಪೊಲೀಸ್ ಅಧಿಕಾರಿಯೊಂದಿಗೆ...

Latestಕ್ರೈಂಬೆಂಗಳೂರು

ಹೆಂಡತಿಯ ಬಾಯಿಗೆ ಅಂಟು ದ್ರಾವಣ ಸುರಿದು ಕೊಲ್ಲಲು ಯತ್ನ..! ಗಂಡ ಅರೆಸ್ಟ್..!

ನ್ಯೂಸ್‌ ನಾಟೌಟ್: ಬೆಂಗಳೂರಿನ ವ್ಯಕ್ತಿಯೊಬ್ಬ ತನ್ನ ಹೆಂಡತಿ ಬೇರೆಯವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಲ್ಲಿ...

Latestಕ್ರೈಂಬೆಂಗಳೂರು

ಗುರಾಯಿಸಿ ನೋಡಿದ್ದಕ್ಕೆ ರಾಡ್‌ ನಿಂದ ತಲೆಗೆ ಹೊಡೆದ ಯುವಕರು..! ಟೀ ಅಂಗಡಿ ಬಳಿ ನಡೆದ ಕಿರಿಕ್ ನಲ್ಲಿ ವ್ಯಕ್ತಿ ಸಾವು..!

ನ್ಯೂಸ್‌ ನಾಟೌಟ್: ಟೀ ಅಂಗಡಿ ಬಳಿ ಗುರಾಯಿಸಿದ್ದಕ್ಕೆ ರಾಡ್‌ ನಿಂದ ತಲೆಗೆ ಹೊಡೆದು ಹತ್ಯೆಗೈದಿರುವ ಘಟನೆ...

Latestಕ್ರೈಂಬೆಂಗಳೂರು

20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ 15ರ ಬಾಲಕಿ..!

ನ್ಯೂಸ್‌ ನಾಟೌಟ್: ಪರೀಕ್ಷೆಗೆ ಓದಿಕೊಳ್ಳುವಂತೆ ತಾಯಿ ಗದರಿಸಿದ್ದಕ್ಕೆ 20ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ...

@2025 – News Not Out. All Rights Reserved. Designed and Developed by

Whirl Designs Logo