ಕ್ರೀಡೆ/ಸಿನಿಮಾದೇಶ-ಪ್ರಪಂಚರಾಜಕೀಯ

ಲೋಕಸಭಾ ಚುನಾವಣೆಗೆ ನಟಿ ಕಂಗನಾ ಸ್ಪರ್ಧೆ..? ಯಾವ ಕ್ಷೇತ್ರದಲ್ಲಿ ಸ್ಪರ್ಧೆ..?

ನ್ಯೂಸ್‌ ನಾಟೌಟ್‌ : ಕಾಂಟ್ರವರ್ಸಿ ಕ್ವೀನ್​ ಎಂದೇ ಫೇಮಸ್​ ಆಗಿರೋ ನಟಿ ಕಂಗನಾ ರಣಾವತ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸುಮಾರು 150 ಲೋಕಸಭಾ ಸ್ಥಾನಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದ್ದು, ವಿಶೇಷವಾಗಿ ಅವುಗಳಲ್ಲಿ ಅತೀ ಹೆಚ್ಚು ಬಿಜೆಪಿ ಸೋತಿರುವ ಕ್ಷೇತ್ರಗಳೇ ಆಗಿರುತ್ತದೆ ಎನ್ನಲಾಗಿದೆ. ಸದ್ಯ ಚುನಾವಣೆ ಘೋಷಣೆಗೂ ಮುನ್ನವೇ ದೆಹಲಿಯಲ್ಲಿ ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.

ಮಂಡಿ ಲೋಕಸಭಾ ಕ್ಷೇತ್ರವೂ ಇದರಲ್ಲಿ ಒಂದು. ಇಲ್ಲಿಯೂ ನಿಗದಿತ ಸಮಯಕ್ಕಿಂತ ಮೊದಲು ಅಭ್ಯರ್ಥಿಯ ಹೆಸರನ್ನು ಘೋಷಿಸುವ ಸಾಧ್ಯತೆ ಇದ್ದು, ಕಳೆದುಹೋದ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಸಮಯಕ್ಕಿಂತ ಮುಂಚಿತವಾಗಿ ಪ್ರಚಾರವನ್ನು ಪ್ರಾರಂಭಿಸುವುದು ಬಿಜೆಪಿಯ ತಂತ್ರಗಾರಿಕೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಹೊರಬೀಳುತ್ತಿದ್ದು, ಇದರಲ್ಲಿ ವಿಶೇಷವಾಗಿ ಬಾಲಿವುಡ್ ನಟಿ ಕಂಗನಾ ರಣಾವತ್‌ ಹೆಸರು ಕೂಡ ಮುಂಚೂಣಿಯಲ್ಲಿದೆ. ಕಳೆದ ಕೆಲವು ಸಮಯದಿಂದ ಕಂಗನಾ ರಣಾವತ್ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಕಂಗನಾ ರಣಾವತ್ ಕೂಡ ಇದನ್ನು ಅಲ್ಲಗಳೆಯದೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಪರೋಕ್ಷವಾಗಿ ಆಸಕ್ತಿ ತೋರಿದ್ದಾರೆ. ಹೀಗಾಗಿ ಮಂಡಿ ಲೋಕಸಭಾ ಕ್ಷೇತ್ರದಿಂದ ಕಂಗನಾ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ.

Related posts

ಎಮ್ಮೆ, ಕೋಣಗಳನ್ನು ಕಡಿಯುವುದಾದರೆ ಗೋವನ್ನು ಏಕೆ ಹತ್ಯೆ ಮಾಡಬಾರದು ಎಂದಿದ್ದ ಸಚಿವರು ಈಗ ಯೂಟರ್ನ್..! ಗೋಹತ್ಯೆ ನಿಷೇಧ ಹಿಂಪಡೆಯುವ ಬಗ್ಗೆ ಪಶುಸಂಗೋಪನೆ ಸಚಿವರು ಹೇಳಿದ್ದೇನು?

ಪ್ರಧಾನಿಯ ‘ಮನ್ ಕೀ ಬಾತ್’ ಆಲಿಸದ ಮಕ್ಕಳಿಗೆ ತಲಾ ₹100 ದಂಡ

ಏರ್ ಇಂಡಿಯಾ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ವರ್ಶ ಮಾಡಿದ್ದೇಕೆ? ಪಾಕ್ ಏರ್ ಇಂಡಿಯಾ ಪ್ರಯಾಣಿಕರನ್ನು ರಕ್ಷಿಸಿದ್ದೇಗೆ? ಏನಿದು ಘಟನೆ?