ಕ್ರೈಂಬೆಂಗಳೂರು

ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

321

ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ಮಾಡಿದ್ದಾರೆ. ಸರ್ಕಾರಿ ಅಧಿಕಾರಿ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ. ಇತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು, ತುಮಕೂರು ಹಾಗೂ ಹಾವೇರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ  ಮಾಡಿದ್ದಾರೆ. ಸರ್ಕಾರಿ ಅಧಿಕಾರಿಗಳು ಆದಾಯ ಮೀರಿ ಅಧಿಕ ಆಸ್ತಿ ಗಳಿಸಿದ ಆರೋಪದ ಮೇಲೆ ದಾಳಿ ನಡೆದಿದ್ದು, ಆದಾಯದ ಮೂಲ, ಆಸ್ತಿ ಪತ್ರಗಳು, ಬ್ಯಾಂಕ್ ವಿವರಗಳ ಬಗ್ಗೆ ಲೋಕಾಯುಕ್ತರ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ತುಮಕೂರಿನ ಕೆಐಎಡಿಬಿ ಅಧಿಕಾರಿ ನರಸಿಂಹಮೂರ್ತಿ ಅವರ ಆರ್.ಟಿ. ನಗರದಲ್ಲಿ ಇರುವ ಮನೆ ಮೇಲೆ ಲೋಕಾಯುಕ್ತ ಡಿಎಸ್ ಪಿಗಳಾದ ಮಂಜುನಾಥ್ ಹಾಗೂ ಹರೀಶ್ ತಂಡ ದಾಳಿ ಮಾಡಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಹಾವೇರಿಯ ನಿರ್ಮಿತಿ ಕೇಂದ್ರದ ಇಂಜಿನಿಯರ್ ವಾಗೀಶ್ ಶೆಟ್ಟರ್ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಾಣೆಬೆನ್ನೂರು ನಗರದ ನಿವಾಸ ಹಾಗೂ ಹಾವೇರಿಯ ದೇವಗರಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ನಿರ್ಮಿತಿ ಕೇಂದ್ರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ಬೆಸ್ಕಾ ಟೆಕ್ನಿಕಲ್ ಡೈರೆಕ್ಟರ್ ರಮೇಶ್ ಮನೆ ಮೇಲೆ ದಾಳಿಯಾಗಿದೆ. ಅಲ್ಲದೇ ಇಂಡಸ್ಟ್ರೀಸ್ ಆ್ಯಂಡ್ ಬಾಯ್ಲರ್ ಇಲಾಖೆ ಅಧಿಕಾರಿಯೊಬ್ಬರ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿ ಕಡತಗಳನ್ನು ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನ ನಿವೇದಿತಾ ನಗರ ಸಂಕ್ರಾಂತಿ ವೃತ್ತದ ಬಳಿ ಇರುವ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿ ಮಹೇಶ್ ಕುಮಾರ್ ನಿವಾಸ ಮತ್ತು ತೋಟದ ಮನೆ ಸೇರಿ ಹಲವು ಕಡೆ ಒಟ್ಟು 13 ಅಧಿಕಾರಿಗಳ ತಂಡ ಏಕಕಾಲಕ್ಕೆ ಕಾರ್ಯಾಚರಣೆ ನಡೆಸಿದೆ.

ಬೀದರ್ ಭೂಸೇನಾ ನಿಗಮದ ಅಧಿಕಾರಿ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೀದರ್ ಹಾಗೂ ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದ ಫಾರ್ಮ್ ಹೌಸ್ ಮೇಲೂ ಲೋಕಾಯುಕ್ತ ಡಿವೈಎಸ್ಪಿ ಓಲೆಕಾರ ನೇತೃತ್ವದಲ್ಲಿ ದಾಳಿಯಾಗಿದೆ. ಬೀದರ್ ಹಾಗೂ ಚಿಟಗುಪ್ಪಾ ತಾಲೂಕಿನ ಮುತ್ತಂಗಿ ಗ್ರಾಮದ ಫಾರ್ಮ್ ಹೌಸ್ ನಲ್ಲೂ ಪರಿಶೀಲನೆ ನಡೆಸಿದ್ದಾರೆ.

See also  'ಎಣ್ಣೆ ಪ್ರಿಯರ' ಸಂಖ್ಯೆಯಲ್ಲಿ ವಿಪರೀತ ಹೆಚ್ಚಳ;ಬಾರ್​ವೊಂದಕ್ಕೆ ಬಿತ್ತು ಬೀಗ…!,ಅಷ್ಟಕ್ಕೂ ಬೀಗ ಜಡಿಯಲು ಕಾರಣವೇನು?ಕುಡುಕರ ಸಂಖ್ಯೆಗೂ-ಬೀಗ ಜಡಿಯುವುದಕ್ಕೂ ಸಂಬಂಧ ಏನು?
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget