Latestಉಡುಪಿ

ನಡು ರಸ್ತೆಯಲ್ಲೇ ಮೀನು ಸಾಗಾಟದ ಲಾರಿ ಪಲ್ಟಿ..! ತಪ್ಪಿದ ಭಾರಿ ಅನಾಹುತ

554
Spread the love

ನ್ಯೂಸ್‌ ನಾಟೌಟ್: ಮಲ್ಪೆಯಿಂದ ಮೀನು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪುಕ್ಕೇರಿ ಬೈಪಾಸ್‌ನಲ್ಲಿ ಶುಕ್ರವಾರ ಸಂಭವಿಸಿದೆ. ಅದೃಷ್ಟವಶಾತ್‌ ಲಾರಿಯಲ್ಲಿದ್ದವರು ಸಣ್ಣ ಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪಟ್ಟಣ ಪೊಲೀಸರು ಭೇಟಿ ನೀಡಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ. ಲಾರಿ ಮಲ್ಪೆಯಿಂದ ಮೀನು ತುಂಬಿಕೊಂಡು ಕಾರ್ಕಳ ಮತ್ತು ಮೂಡುಬಿದಿರೆ ಕಡೆಗೆ ಸಂಚರಿಸುತ್ತಿತ್ತು ಎಂದು ತಿಳಿದುಬಂದಿದೆ.

See also  ಮಂಗಳೂರು: ಯುವತಿ ಮೇಲೆ ಅತ್ಯಾಚಾರ ಆರೋಪದ ಬಗ್ಗೆ ಆಕೆ ಹೇಳಿದ್ದೇನು..? 24 ಗಂಟೆಗಳೊಳಗೆ ಮೂವರು ಅರೆಸ್ಟ್..!
  Ad Widget   Ad Widget   Ad Widget   Ad Widget   Ad Widget   Ad Widget