ಕರಾವಳಿ

ಲಾರಿ ಡಿಕ್ಕಿ: ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು

439

ನ್ಯೂಸ್ ನಾಟೌಟ್: ಯಮ ಸ್ವರೂಪಿಯಾಗಿ ಬಂದ ಲಾರಿಯೊಂದು ಸಿಂಧನೂರು ತಾಲ್ಲೂಕಿನ ಬಾಲಯ್ಯ ಕ್ಯಾಂಪ್ ಬಳಿ ಎಲ್ ಬೋರ್ಡ್ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನ ಆಂಧ್ರಪ್ರದೇಶ ಮೂಲದ ದಂಪತಿಗಳಾದ ದೀಪ್(35), ಪೂರ್ಣಿಮಾ(30), ಅವರ ಮಕ್ಕಳಾದ ಜಶಿನ್(12) ಹಾಗೂ ಮಾಹಿನ್(7) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಸಿಂಧನೂರು ಮಾರ್ಗವಾಗಿ ಹೈದರಾಬಾದ್‌ಗೆ ತೆರಳುತ್ತಿದ್ದ ಕುಟುಂಬ ದುರಂತ ಸಾವಿಗೀಡಾಗಿದೆ. ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಮೃತ ದೇಹಗಳನ್ನ ಸಿಂಧನೂರು ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ.

See also  ಮಡಿಕೇರಿ: ನೀವು ಕೆಲಸದ ಹುಡುಕಾಟದಲ್ಲಿದ್ದೀರಾ?ಕರ್ನಾಟಕ ಅರಣ್ಯ ಇಲಾಖೆ ಅರಣ್ಯ ವೀಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳ ಆಹ್ವಾನ..!ಸಂಬಳವೆಷ್ಟು ಗೊತ್ತಾ?
Ad Widget   Ad Widget   Ad Widget   Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget