ಕ್ರೈಂದೇಶ-ವಿದೇಶರಾಜ್ಯವೈರಲ್ ನ್ಯೂಸ್

ನೇಹಾ ಮಾದರಿ ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ ಪಾಗಲ್ ಪ್ರೇಮಿ..! ನಿದ್ದೆಯಲ್ಲಿದ್ದ ಆಕೆಗೆ ಚೂರಿ ಇರಿದು ಪರಾರಿ..!

285

ನ್ಯೂಸ್ ನಾಟೌಟ್: ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್​ ಸದಸ್ಯನ ಪುತ್ರಿ ನೇಹಾ ಹಿರೇಮಠ್ ಕೊಲೆ ಪ್ರಕರಣ ಮಾಸುವ ಮುನ್ನವೇ ಅದೇ ರೀತಿಯ ಮತ್ತೊಂದು ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್​ ಠಾಣಾ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ಬುಧವಾರ ಮುಂಜಾನೆ (ಮೇ 15) ನಡೆದಿದೆ. ಕೊಲೆಯಾದ ಯುವತಿಯನ್ನು ಅಂಜಲಿ ಅಂಬಿಗೇರ (20) ಎಂದು ಗುರುತಿಸಲಾಗಿದ್ದು, ವಿಶ್ವ ಅಲಿಯಾಸ್​ ಗಿರೀಶ್​ ಎಂಬಾತ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ತಲೆಮಾರಿಸಿಕೊಂಡಿದ್ದಾನೆ ಎಂದು ವರದಿ ತಿಳಿಸಿದೆ.

ಆರೋಪಿ ಹಲವು ದಿನಗಳಿಂದ ತನ್ನನ್ನು ಪ್ರೀತಿಸುವಂತೆ ಯುವತಿಯನ್ನು ಪೀಡಿಸುತ್ತಿದ್ದ ಎಂದು ತಿಳಿದು ಬಂದಿದೆ. ಆದರೆ, ಯುವತಿ ಈತನ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನಲಾಗಿದೆ. ಈತನ ವಿರುದ್ಧ ಹಲವು ಕಳ್ಳತನ ಪ್ರಕರಣಗಳಲ್ಲಿ ಶಾಮೀಲಾದ ಆರೋಪವೂ ಇದೆ. ಜತೆಗೆ, ಬೈಕ್ ಕಳ್ಳತನದಲ್ಲಿಯೂ ಆರೋಪಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ವಿಶ್ವ ಧಮ್ಕಿ ಹಾಕಿದ್ದ. ಅಕಸ್ಮಾತ್ ನೀನು ನನ್ನ ಜೊತೆ ಬರದೆ ಹೋದರೆ ನೇಹಾ ಮಾದರಿ ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ. ಅದರಂತೆಯೇ ಬುಧವಾರ (ಮೇ 15) ಬೆಳಗ್ಗೆ 5.30ಕ್ಕೆ ಮನೆಗೆ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಮನೆಯವರು ತಡೆಯಲು ಮುಂದಾದರೂ ಬಿಡದೆ ಹತ್ಯೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

Click 👇

https://newsnotout.com/2024/05/hindu-muslim-marriage-issue-and-police
See also  ಪೆರಾಜೆ: ವಿಷ ಸೇವಿಸಿ ಯುವಕ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget