ಕರಾವಳಿಕ್ರೈಂಬೆಂಗಳೂರು

ಪ್ರೀತಿಸಿ ಮದುವೆಯಾದಕೆಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ಕೊಟ್ಟು ಕೊಂದ ಗಂಡ..! ಕನ್ನಡ ಚಿತ್ರರಂಗದಲ್ಲಿ ಕೊರಿಯೋಗ್ರಾಫರ್ ಆಗಿದ್ದ ಯುವತಿ..!

ನ್ಯೂಸ್ ನಾಟೌಟ್: ರಾತ್ರಿ ತಡವಾಗಿ ಬರುತ್ತಿ ಎಂದು ಶೀಲದ ಮೇಲೆ ಶಂಕೆಯಿಂದ ಆಕೆಯ ಗಂಡನೇ ಭೀಕರವಾಗಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ಬುಧವಾರ(ಆ.28) ಮಧ್ಯಾಹ್ನ ನಡೆದಿದೆ. ಕೊಲೆಯಾದ ಯುವತಿ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದಳು ಎನ್ನಲಾಗಿದೆ.

ಕೊಲೆಯಾದ ಮಹಿಳೆಯನ್ನು ನವ್ಯಾ (25) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ವ್ಯಕ್ತಿಯನ್ನು ಈಕೆಯ ಗಂಡ ಕಿರಣ್ ಎಂದು ಹೇಳಲಾಗಿದೆ. ಕಿರಣ್ ಪತ್ನಿಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ಕೊಟ್ಟು, ನೀನು ಯಾರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದೀಯ ಹೇಳು ಎಂದು ಕೇಳಿದ್ದಾನೆ. ಮಧ್ಯಾಹ್ನ 1.30ರ ಸುಮಾರಿಗೆ ಕೊಲೆ ಮಾಡಿದ್ದು, ಸಂಜೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ.

ಕಿರಣ್ ಮತ್ತು ನವ್ಯಾ ಕಳೆದ ಮೂರು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆ ಮಾಡಿಕೊಂಡಿದ್ದರು. ಇನ್ನು ನವ್ಯಾ ಸಿನಿಮಾರಂಗದಲ್ಲಿ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಳು. ಆದರೆ, ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾ ಸಮಯಕ್ಕೆ ಸರಿಯಾಗಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಹೆಂಡತಿಯೊಂದಿಗೆ ಜಗಳ ಮಾಡಿದ್ದಾನೆ.
ಇನ್ನು ಕೆಲಸದ ಒತ್ತಡದಲ್ಲಿ ಮನೆಗೆ ಬರುವುದು ತಡವಾಗುತ್ತಿದ್ದ ಹಿನ್ನೆಲೆಯಲ್ಲಿ ಇಬ್ಬರ ನಡುವೆಯೂ ಆಗಿಂದಾಗ್ಗೆ ಜಗಳ ನಡೆಯುತ್ತಿತ್ತು. ಆದರೆ, ಇದನ್ನು ಅರ್ಥ ಮಾಡಿಕೊಳ್ಳದ ಗಂಡ ಕಿರಣ್ ಹೆಂಡತಿಗೆ ಅನೈತಿಕ ಸಂಬಂಧವಿದೆ ಎಂದು ಆಕೆಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸುತ್ತಲೇ ಇದ್ದನು.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದವಳಾದ ನವ್ಯಾ ಕಿರಣ್‌ನನ್ನು ಪ್ರೀತಿಸಿ ಮದುವೆಯಾದ ನಂತರ ಗಂಡನೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದಳು. ಆದರೆ, ಈಗ ಗಂಡನಿಂದಲೇ ಭೀಕರವಾಗಿ, ಚಿತ್ರಹಿಂಸೆ ಅನುಭವಿಸಿ ಪ್ರಾಣ ಬಿಟ್ಟಿದ್ದಾಳೆ. ಇನ್ನು ಘಟನೆ ತಿಳಿದ ಬಳಿಕ ಕೆಂಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಪತ್ನಿ ನವ್ಯಾಳನ್ನು ಕೊಲೆ ಮಾಡಿ ಪರಾರಿ ಆಗಿದ್ದ ಕಿರಣ್‌ನನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

Click

https://newsnotout.com/2024/08/darshan-thugudeepa-shift-to-ballary-jail-kannada-news-fans/

Related posts

ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಕಳ್ಳರ ಹಾವಳಿ..! ರಥ ಬೀದಿಯಲ್ಲಿ ನಿಲ್ಲಿಸಿದ್ದ ಯಾತ್ರಾರ್ಥಿಗಳ ಕಾರಿನ ಗಾಜು ಪುಡಿ, ಚಿನ್ನ ಸೇರಿದಂತೆ ಬೆಲೆ ಬಾಳುವ ವಸ್ತುಗಳ ಕಳ್ಳತನ

ಎಲ್ಲರ ಚಿತ್ತ ‘ಬೆಂಗಳೂರು ಕಂಬಳ-ನಮ್ಮ ಕಂಬಳ’ದತ್ತ..! ಅದ್ದೂರಿ ತಯಾರಿ,ಪೂರ್ವಭಾವಿಯಾಗಿ ಕುದಿ ಕಂಬಳಕ್ಕೆ ಚಾಲನೆ

ಮಂಗಳೂರು: ಯುವ ಉದ್ಯಮಿ ಕುಸುಮಾಧರ ಸೇರಿದಂತೆ 25 ಮಂದಿಗೆ ‘ಬಿಜಿಎಸ್ ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯ