Latestಕ್ರೈಂರಾಜ್ಯವೈರಲ್ ನ್ಯೂಸ್

ಸರ್ಕಾರಿ ಪಿಯು ಕಾಲೇಜಿನಲ್ಲಿ ಓದುತ್ತಿದ್ದ ಪ್ರೇಮಿಗಳು ಕಾಡಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ..! ಪಿಯುಸಿ ಫಲಿತಾಂಶ ಬಂದ ದಿನದಿಂದ ನಾಪತ್ತೆಯಾಗಿದ್ದ ಜೋಡಿ..!

1.7k
Pc Cr: Public Tv

ನ್ಯೂಸ್‌ ನಾಟೌಟ್‌: ನಾಪತ್ತೆಯಾಗಿದ್ದ ಪ್ರೇಮಿಗಳಿಬ್ಬರು ದಾವಣಗೆರೆಯ ಹರಪನಹಳ್ಳಿ ಪಟ್ಟಣದ ಹೊರವಲಯದ ಅನಂತನಹಳ್ಳಿ ಸರ್ಕಾರಿ ಐಟಿಐ ಎದುರಿಗಿರುವ ಅರಣ್ಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಜಟ್ಟಿನಕಟ್ಟೆ ಗ್ರಾಮದ ಮದ್ದನಸ್ವಾಮಿ(18), ಬಂಡ್ರಿ ಗ್ರಾಮದ ದೀಪಿಕಾ(18) ನೇಣಿಗೆ ಶರಣಾದ ಪ್ರೇಮಿಗಳು ಎಂದು ಗುರುತಿಸಲಾಗಿದೆ. ಒಂದೇ ಮರದ ಕೊಂಬೆಗೆ ಇಬ್ಬರೂ ನೇಣುಬಿಗಿದುಕೊಂಡಿದ್ದಾರೆ.

ಮದ್ದನಸ್ವಾಮಿ ಹಾಗೂ ದೀಪಿಕಾ ಹರಪನಹಳ್ಳಿ ಸರ್ಕಾರಿ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಇವರಿಬ್ಬರು ಏ.15 ಪಿಯುಸಿ ಫಲಿತಾಂಶ ಬಂದ ದಿನದಿಂದ ನಾಪತ್ತೆಯಾಗಿದ್ದರು. ಇಬ್ಬರೂ ಪಿಯುಸಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಯಾಗಿದ್ದು, ದೀಪಿಕಾ 438 ಹಾಗೂ ಮದ್ದನಸ್ವಾಮಿ 373 ಅಂಕ ಪಡೆದಿದ್ದರು.

ಘಟನಾ ಸ್ಥಳಕ್ಕೆ ಹರಪನಹಳ್ಳಿ ಪೊಲೀಸರು ಭೇಟಿ ನೀಡಿ, ಪರಶೀಲನೆ ನಡೆಸಿದ್ದಾರೆ.

ಮಗಳ ಮಾವನ ಜೊತೆ ನಾಲ್ಕು ಮಕ್ಕಳ ತಾಯಿ ಪರಾರಿ..! ದೂರು ದಾಖಲಿಸಿದ ಗಂಡ..!

ದೇಶದಲ್ಲೇ ಅತಿಹೆಚ್ಚು ಹಾಲು ಉತ್ಪಾದಿಸುವ ರಾಜಸ್ಥಾನದಲ್ಲೂ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ತಯಾರಿ, ಈ ಬಗ್ಗೆ KMF ಹೇಳಿದ್ದೇನು..?

See also  ಶಾಲೆಯ ಟೆರೇಸ್​ನಿಂದ ಬಿದ್ದು ವಿದ್ಯಾರ್ಥಿನಿ ದುರಂತ ಅಂತ್ಯ! ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆ ಮಾಡಿದರೇ ಶಿಕ್ಷಕರು!?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget