Latestಕ್ರೈಂರಾಜ್ಯವೈರಲ್ ನ್ಯೂಸ್

ಬೇರೆ ಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದು ನದಿಗೆ ಎಸೆದ ತಂದೆ..! ಸಿನಿಮೀಯ ರೀತಿಯಲ್ಲಿ ಬಯಲಾದ ಪ್ರಕರಣ..!

142

ನ್ಯೂಸ್ ನಾಟೌಟ್: ಬೇರೆ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿ ಶವವನ್ನು ನದಿಗೆ ಎಸೆದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ನಡೆದಿರುವುದು ಬಹಳ ತಡವಾಗಿ ಬೆಳಕಿಗೆ ಬಂದಿದೆ.

ಯುವಕನ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆ ವೇಳೆ ಆರೋಪಿಯೇ ನ್ಯಾಯಾಲಯದಲ್ಲಿ ಸತ್ಯ ವಿಚಾರ ತಿಳಿಸಿದ್ದರಿಂದ ಘಟನೆ ಬೆಳಕಿಗೆ ಬಂದಿದೆ. 2024ರ ಸೆಪ್ಟೆಂಬರ್ 29ರಂದು ಪುತ್ರಿ ರೇಣುಕಾಳನ್ನು (18) ಕೊಲೆ ಮಾಡಿದ್ದ ತಂದೆ ಲಕ್ಕಪ್ಪ ಕಂಬಳಿ ಎಂಬಾತ ಶವವನ್ನು ಮೂಟೆಕಟ್ಟಿ ಕೃಷ್ಣಾ ನದಿಗೆ ಎಸೆದಿದ್ದ ಎನ್ನಲಾಗಿದೆ.

ಈ ಹಿಂದೆ ಗ್ರಾಮದ ಅನ್ಯ ಜಾತಿಯ ಯುವಕ ಹನುಮಂತನನ್ನು ರೇಣುಕಾ ಪ್ರೀತಿಸಿದ್ದಳು. ಮದುವೆಗೆ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಇಬ್ಬರೂ ಗ್ರಾಮ ಬಿಟ್ಟು ಓಡಿ ಹೋಗಿದ್ದರು. ಆಗ ರೇಣುಕಾಗೆ 17 ವರ್ಷ ವಯಸ್ಸಾಗಿತ್ತು. ಮಗಳು ಅಪ್ರಾಪ್ತ ವಯಸ್ಕಳಾಗಿದ್ದರಿಂದ ಆಕೆಯ ತಂದೆ ಲಕ್ಕಪ್ಪ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ, ಹನುಮಂತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು.

ಪೋಕ್ಸೋ ಪ್ರಕರಣದಡಿ ಪೊಲೀಸರು ಹನುಮಂತನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಆದರೆ, ರೇಣುಕಾ ಮಾತ್ರ ಹನುಮಂತನನ್ನೇ ಮದುವೆ ಆಗುತ್ತೇನೆಂದು ಪಟ್ಟು ಹಿಡಿದಿದ್ದಳು. ಇದಾದ ಕೆಲವು ದಿನಗಳ ನಂತರ ಹನುಮಂತ ಜಾಮೀನು ಮೇಲೆ ಹೊರ ಬಂದಿದ್ದ. ಬಳಿಕ ಆತನ ಜೊತೆ ರೇಣುಕಾ ಓಡಾಟ ಆರಂಭಿಸಿದ್ದಳು. ಎಷ್ಟೇ ಬುದ್ಧಿ ಹೇಳಿದರೂ ಕೇಳದೆ, ಹನುಮಂತನನ್ನೇ ಮದುವೆ ಆಗುವೆ ಎಂದಿದ್ದಳು. ಇದರಿಂದ ಕೋಪಗೊಂಡು ಮಗಳನ್ನು ಕೊಲೆ ಮಾಡಿರುವುದಾಗಿ ತಂದೆ ಲಕ್ಕಪ್ಪ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾರೆ. ಬಳಿಕ ಮಗಳ ಶವವನ್ನು ನದಿಗೆ ಎಸೆದಿದ್ದ. ಮಗಳ ಪ್ರಿಯಕರನ ಪೋಕ್ಸೋ ಪ್ರಕರಣ ವಿಚಾರಣೆ ವೇಳೆ ಮಗಳನ್ನು ಕರೆತರಲು ನ್ಯಾಯಾಲಯ ಹೇಳಿದಾಗ, ಆಕೆಯ ತಂದೆ ಈ ವಿಚಾರವನ್ನು ಹೇಳಿ, ತಪ್ಪೊಪ್ಪಿಕೊಂಡಿದ್ದಾರೆ.

ಕಾರ್ಕಳ: ಕಾರಿನೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಉದ್ಯಮಿ..! ಪ್ರಕರಣ ದಾಖಲು

ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಸರಬರಾಜು ಮಾಡಿಲ್ಲ ಎಂದ ಟರ್ಕಿ..! ಟರ್ಕಿಗೆ ಭೂಕಂಪ ಸಂದರ್ಭದಲ್ಲಿ ಭಾರೀ ಪ್ರಮಾಣದ ಸಹಾಯ ಮಾಡಿದ್ದ ಭಾರತ..!

 

See also  ತೇಜಸ್ವಿ ಯಾದವ್ ಬದಲು ಹೆಸರು ತಪ್ಪಿ ತೇಜಸ್ವಿ ಸೂರ್ಯ ವಿರುದ್ಧ ವಾಗ್ದಾಳಿ..! ಮುಜುಗರಕ್ಕೊಳಗಾದ ಕಂಗನಾ ರಣಾವತ್..! ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget   Ad Widget