ಕ್ರೀಡೆ/ಸಿನಿಮಾ

ಟೋಕಿಯೋ ಒಲಿಂಪಿಕ್ಸ್: ಬಾಕ್ಸಿಂಗ್‌ನಲ್ಲಿ ಭಾರತಕ್ಕೆ ಕಂಚಿನ ಪದಕ ಗೆದ್ದು ಕೊಟ್ರು ಅಸ್ಸಾಂ ಹುಡುಗಿ ಲವ್ಲಿನಾ

997

ಟೋಕಿಯೊ: ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರು ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದು ಭಾರತಕ್ಕೆ ಲಭಿಸುತ್ತಿರುವ ಮೂರನೇ ಪದಕವಾಗಿದೆ. ಇಂದು ನಡೆದ ಸೆಮಿ ಫೈನಲ್​ ಪಂದ್ಯದಲ್ಲಿ ಟರ್ಕಿಯಾದ ಬುಸೆನಾಜ್ ಸುರ್ಮೆನೆಲಿ ವಿರುದ್ಧ 5-0 ಅಂತರದಲ್ಲಿ ಸೋಲು ಕಾಣುವ ಮೂಲಕ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಮಹಿಳಾ ಬಾಕ್ಸಿಂಗ್​ನ 69 ಕೆಜಿ ವಿಭಾಗದ ಸೆಮಿಫೈನಲ್​ನಲ್ಲಿ ಲವ್ಲಿನಾ, ಎದುರಾಳಿ ಅಗ್ರ ಶ್ರೇಯಾಂಕಿತೆ ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ಧ ತಿರುಗಿ ಬೀಳಲು ಸಾಧ್ಯವಾಗಲೇ ಇಲ್ಲ. ಬುಸೆನಾಜ್ ಅವರ ಆಕ್ರಮಣಕಾರಿ ಆಟಕ್ಕೆ ಸೋಲು ಅನುಭವಿಸಿದರು. ಆಗಲೇ ಸೆಮಿಫೈನಲ್​ಗೆ ಪ್ರವೇಶಿಸುವ ಮೂಲಕ ಕನಿಷ್ಠ ಕಂಚಿನ ಪದಕ ಖಾತ್ರಿಪಡಿಸಿದ್ದ ಲವ್ಲಿನಾ, ಚಿನ್ನದ ಪದಕ ಗುರಿಯನ್ನಿರಿಸಿದ್ದರು. ಆದರೆ ಅಂತಿಮ ನಾಲ್ಕರ ಘಟ್ಟದಲ್ಲಿ ಎಡವಿದ್ದಾರೆ.

See also  ಚಿಕಿತ್ಸೆಗಾಗಿ ಲಂಡನ್‌ಗೆ ಹಾರಿದ ನಟಿ ರಮ್ಯಾ! ಅಷ್ಟಕ್ಕೂ ಮೋಹಕತಾರೆಗೆ ಏನಾಯ್ತು?
  Ad Widget   Ad Widget   Ad Widget   Ad Widget   Ad Widget   Ad Widget   Ad Widget