ನ್ಯೂಸ್ ನಾಟೌಟ್: ಸಹನಟಿಗೆ ಕಿರುಕುಳ ಹಾಗೂ ವಂಚನೆ ಆರೋಪದಲ್ಲಿ ನಟ ಮಡೆನೂರು ಮನುವನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇಂದು(ಮೇ.26) 3ನೇ ಎಸಿಜೆಎಂ ನ್ಯಾಯಾಧೀಶರ ಮುಂದೆ ಪೊಲೀಸರು ಆರೋಪಿಯನ್ನ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿ ಮನುಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ನೀಡಿ ಆದೇಶಿಸಿದ್ದಾರೆ.
ಅತ್ಯಾಚಾರದಂತ ಗಂಭೀರ ಆರೋಪ ಎದುರಿಸುತ್ತಿರುವ ಮಡೆನೂರು ಮನುಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮಡೆನೂರು ಮನು ಬಂಧನದ ಬಳಿಕ ನಟ ಶಿವರಾಜ್ ಕುಮಾರ್, ದರ್ಶನ್, ಧ್ರುವ ಸರ್ಜಾ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಎನ್ನಲಾಗಿರುವ ಆಡಿಯೋ ವೈರಲ್ ಆಗಿತ್ತು. ಆ ಆಡಿಯೋದಲ್ಲಿ ಶಿವಣ್ಣ, ದರ್ಶನ್, ಧ್ರುವ ಸರ್ಜಾ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ್ದಕ್ಕೆ ಡಾ. ರಾಜ್ ಕುಮಾರ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣದ ಬಗ್ಗೆ ನಟ ಜಗ್ಗೇಶ್ ಪ್ರತಿಕ್ರಿಯಿಸಿದ್ದಾರೆ, ಒಂದು ಗಾದೆ ಮಾತು ನೆನಪಾಯಿತು.. “ಅಲ್ಪನಿಗೆ ಐಶ್ವರ್ಯ ಬಂದ್ರೆ ಅರ್ಧ ರಾತ್ರೀಲಿ ಕೊಡೆ ಹಿಡಿದಂಗೆ”, ಗುರುಹಿರಿಯರ ಮೇಲೆ ಗೌರವ ತೋರದವನು ಗೆದ್ದ ಇತಿಹಾಸ ಇಲ್ಲ. ಇಂದು ಇದ್ದದ್ದು ನಾಳೆ ಇರದು ಅಹಂಕಾರ ಬಿಡಿ ಅಂಬೆಗಾಲು ಇಡುತ್ತಿರುವ ಕೂಸುಗಳೆ! ಆಯುಷ್ಯ ಬರೆಯೋದು ಬ್ರಹ್ಮ, ಚಿಲ್ಲರೆ ಮನುಷ್ಯರಲ್ಲ. ಇಂದಿನ ಚಿತ್ರರಂಗದ ಅಸಹ್ಯ ಕಂಡು ದುಃಖವಾಯಿತು.
ಒಂದು ಗಾದೆ ಮಾತು ನೆನಪಾಯಿತು!
“ಅಲ್ಪನಿಗೆ ಐಶ್ವರ್ಯ ಬಂದ್ರೆ ಅರ್ಧ
ರಾತ್ರೀಲಿ ಕೊಡೆ ಹಿಡಿದಂಗೆ”
ಗುರುಹಿರಿಯರ ಮೇಲೆ ಗೌರವ ತೋರದವನು ಗೆದ್ದ ಇತಿಹಾಸ ಇಲ್ಲಾ!
ಇಂದು ಇದ್ದದ್ದು ನಾಳೆ ಇರದು ಅಹಂಕಾರ ಬಿಡಿ ಅಂಬೆಗಾಲು ಇಡುತ್ತಿರುವ ಕೂಸುಗಳೆ!
ಆಯುಷ್ಯ ಬರೆಯೋದು ಬ್ರಹ್ಮ
ಚಿಲ್ಲರೆ ಮನುಷ್ಯರಲ್ಲಾ!
ಇಂದಿನ ಚಿತ್ರರಂಗದ ಅಸಹ್ಯ ಕಂಡು ದುಃಖವಾಯಿತು!!— ನವರಸನಾಯಕ ಜಗ್ಗೇಶ್ (@Jaggesh2) May 25, 2025
ಶಿವರಾಜ್ ಕುಮಾರ್ ಚಿತ್ರರಂಗದ ಕಿರೀಟ ಇದ್ದಂತೆ. ಎಲ್ಲರನ್ನು ಪ್ರೀತಿಸುವ ಜೀವ ಅಂಥವರ ಸಾವು ಬಯಸಿದವರಿಗೆ ಕೇಡುಗಾಲ ಕಾದಿದೆ. ನೊಂದುಕೊಳ್ಳದಿರಿ ಶಿವಣ್ಣ ನೀವು ಹಿಮಾಲಯ, ನಿಮಗೆ ದೀರ್ಘಾಯುಷ್ಯ ಪ್ರಾಪ್ತಿ ಇದೆ. ನಿಮ್ಮ ಹೆತ್ತವರು ಮತ್ತು ಕನ್ನಡಿಗರ ಆಶೀರ್ವಾದ ಇದೆ. ಹೀಗೆ ಸುದೀರ್ಘವಾಗಿ ಬರೆದು, ಮಡೆನೂರ್ ಮನುಗೆ ನಟ ಜಗ್ಗೇಶ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದ ರಾಜಕೀಯ ಮುಖಂಡ ಅರೆಸ್ಟ್..! ಇಲ್ಲಿದೆ ಸಂಪೂರ್ಣ ಮಾಹಿತಿ