ನ್ಯೂಸ್ ನಾಟೌಟ್ : ಬೈಕ್ ಮತ್ತು ವ್ಯಾಗನರ್ ಕಾರ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ದುರಂತ ಅಂತ್ಯ ಕಂಡಿರುವ ಘಟನೆ ವರದಿಯಾಗಿದೆ.ಪೊನ್ನಂಪೇಟೆ ತಾಲೂಕಿನ ಕಿರುಗೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು,ಕೋತೂರು ಗ್ರಾಮದ ಬೈಕ್ ಸವಾರ ಶಶಿ(22) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಅಪಘಾತದಿಂದ ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಗೋಣಿಕೊಪ್ಪಲು ಸಮುದಾಯ ಅರೋಗ್ಯ ಕೇಂದ್ರಕ್ಕೆ ಸಾಗಿಸುವ ಸಂದರ್ಭ ಮಾರ್ಗಮಧ್ಯೆ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.ಪೊನ್ನಂಪೇಟೆ ಕಡೆಯಿಂದ ಬಾಳಲೆ ಕಡೆಗೆ ಹೋಗುತ್ತಿದ್ದ ಬೈಕ್ ಹಾಗೂಬಾಳಲೆ ಕಡೆಯಿಂದ ಪೊನ್ನಂಪೇಟೆ ಕಡೆಗೆ ಹೋಗುತ್ತಿದ್ದ ಕಾರ್ ಪರಸ್ಪರ ಡಿಕ್ಕಿಯಾಗಿದೆ.ಅಳಮೇಂಗಡ ಬೋಸ್ ಮಂದಣ್ಣ ಎಂಬುವರಿಗೆ ಸೇರಿದ ಕಾರು ಇದಾಗಿದ್ದು,ಸ್ಥಳಕ್ಕೆ ವಿರಾಜಪೇಟೆ ಡಿವೈಎಸ್ಪಿ ಆರ್.ಮೋಹನ್ ಕುಮಾರ್, ಪೊನ್ನಂಪೇಟೆ ಪೊಲೀಸ್ ಠಾಣಾಧಿಕಾರಿ ಭೇಟಿ ನೀಡಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.