ಕರಾವಳಿಕೊಡಗುರಾಜಕೀಯ

ಮಡಿಕೇರಿ:ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ,ವಶಕ್ಕೆ ಪಡೆದು ಚಳಿ ಬಿಡಿಸಿದ ಪೊಲೀಸರು!

253

ನ್ಯೂಸ್ ನಾಟೌಟ್ : ವ್ಯಕ್ತಿಯೊಬ್ಬ ಗಾಂಜಾ ಸೇವನೆ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿ ಹಿನ್ನೆಲೆ ಆತನನ್ನು ವಶಕ್ಕೆ ಪಡೆಯಲಾಗಿದೆ.ಈತ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಎಂದು ನಾಪೋಕ್ಲು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಗ್ಯಾಸ್ ಏಜೆನ್ಸಿಯ ವಾಹನ ಚಾಲಕ ಎಸ್.ಬಿ.ಪವನ್ ಬಂಧಿತ ವ್ಯಕ್ತಿ.

ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಈತನನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.ಈ ವೇಳೆ ನಾಪೊಕ್ಲು ಠಾಣಾಧಿಕಾರಿ ಸಾರ್ವಜನಿಕರಲ್ಲಿ ಮನವಿ ಮಾಡುತ್ತಾ ನಾಪೋಕ್ಲು ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸಾರ್ವಜನಿಕರು ಠಾಣೆಯ ಮೊಬೈಲ್ ಸಂಖ್ಯೆ 9480804948  ಗೆ ಮಾಹಿತಿ ನೀಡುವಂತೆ ಹೇಳಿದ್ದಾರೆ.ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಗೌಪ್ಯವಾಗಿಡಲಾಗುವುದೆಂದು ಠಾಣಾಧಿಕಾರಿ ಈ ಮೂಲಕ ತಿಳಿಸಿದ್ದಾರೆ.

See also  ಮಡಿಕೇರಿ:ಸ್ನಾನಕ್ಕೆಂದು ಹೋದವ ನೀರಲ್ಲಿ ಮುಳುಗಿ ಸಾವು,ಹೊಟ್ಟೆ ಪಾಡಿಗೆ ಬಂದಾತ ಹೆಣವಾದ!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget