ನ್ಯೂಸ್ ನಾಟೌಟ್: ಕೊಡಗಿನಲ್ಲಿರುವ ಜನಪ್ರಿಯ ಪ್ರವಾಸಿ ತಾಣ ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆಯನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ. ಈ ಮೂಲಕ ಗ್ಲಾಸ್ ಬ್ರಿಡ್ಜ್ ಕಾರ್ಯಕ್ಕೆ ಫುಲ್ ಸ್ಟಾಪ್ ಬಿದ್ದಿದೆ.
ಇತ್ತೀಚೆಗೆ ರಾಜಾಸೀಟ್ ನಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಗಾಜಿನ ಸೇತುವೆ ಮತ್ತು ಫುಡ್ ಕೋರ್ಟ್ ನಿರ್ಮಾಣ ಯೋಜನೆಗೆ ತೋಟಗಾರಿಕೆ ಇಲಾಖೆ ಟೆಂಡರ್ ಆಹ್ವಾನಿಸಿತ್ತು. ಇದಕ್ಕೆ ಜನರಿಂದ ಸಾಕಷ್ಟು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಸರ್ಕಾರ ಆ ಯೋಜನೆಯನ್ನು ಹಿಂಪಡೆದಿದೆ. ಜನರ ಜೀವಕ್ಕೆ ಈ ಗ್ಲಾಸ್ ಬ್ರಿಡ್ಜ್ ಅಪಾಯ ತರುವ ಸಾಧ್ಯತೆ ಹಿನ್ನೆಲೆಯಲ್ಲಿ ಅದನ್ನು ನಿರ್ಮಾಣ ಮಾಡಬಾರದು ಎನ್ನುವ ಒತ್ತಾಯ ಕೇಳಿ ಬಂದಿತ್ತು.
ಈ ಬಗ್ಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಮಾಹಿತಿ ನೀಡಿದ್ದು, ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ರಾಜ್ಯ ಸರ್ಕಾರ ಹಿಂಪಡೆದಿದೆ. ಗ್ಲಾಸ್ ಬ್ರಿಡ್ಜ್ಗೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿದೆ. ಗ್ಲಾಸ್ ಬ್ರಿಡ್ಜ್ ನಿರ್ಮಾಣವಾದರೆ ಅಪಾಯವಾಗುವ ಸಾಧ್ಯತೆ ಇದೆ. ಹಾಗಾಗಿ ಈ ಯೋಜನೆ ರದ್ದು ಮಾಡಲಾಗಿದೆ ಎಂದು ಹೇಳಿದ್ದಾರೆ.