ಸುಳ್ಯ

Madikeri: ಅರೆಸುಟ್ಟ ಮೃತದೇಹದ ಪ್ರಕರಣ; ಪೊಲೀಸರಿಂದ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಮತ್ತೆ ಬೆನ್ನಟ್ಟಿ ಹಿಡಿದ ಪೊಲೀಸರು!

ನ್ಯೂಸ್‌ ನಾಟೌಟ್ : ಈ ಒಂದು ಘಟನೆ ಎಲ್ಲರನ್ನು ಬೆಚ್ಚಿ ಬೀಳಿಸುವಂತೆ ಮಾಡಿತ್ತು. ಕೊಡಗು ಜಿಲ್ಲೆಯ ಸುಂಟಿಕೊಪ್ಪ ವ್ಯಾಪ್ತಿಯ ಕಾಫಿ ತೋಟವೊಂದರಲ್ಲಿ ಅರೆಸುಟ್ಟ ಮೃತದೇಹದ ಪ್ರಕರಣ ಹಲವು ಅನುಮಾನಗಳಿಗೂ ಎಡೆ ಮಾಡಿ ಕೊಟ್ಟಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಬೆಳವಣಿಗೆಗಳು ನಡೆದಿದ್ದು, ತಪ್ಪಿಸಿಕೊಂಡಿದ್ದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೊಲೆ ಆರೋಪದಡಿ ತನಿಖೆ ಎದುರಿಸಿ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ ಹರಿಯಾಣ ರಾಜ್ಯದ ಕಾರ್ನಲ್‌ ಗರುಂದ ನಿವಾಸಿ ಅಂಕೂರ್‌ ರಾಣ(30) ಎಂಬಾತನನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಈತ ತೆಲಂಗಾಣ ರಾಜ್ಯದಲ್ಲಿ ಸ್ಥಳ ಮಹಜರು ಮಾಡಲು ತೆರಳಿದ ಸಂದರ್ಭ ಮೂವರು ಆರೋಪಿಗಳಲ್ಲಿ ಒಬ್ಬನಾಗಿದ್ದು, ಪೊಲೀಸ್‌ ಕಸ್ಟಡಿಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ. ಹರಿಯಾಣ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಸತತ 6 ದಿನಗಳಿಂದ ಕಾರ್ಯಾಚರಣೆ ನಡೆಸಿ ರಾಜಸ್ಥಾನದ ಕೋಟಾ ಎಂಬಲ್ಲಿ ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಪತಿಯನ್ನೇ ಕೊಲೆ ಮಾಡಲು ಸಂಚು ರೂಪಿಸಿದ ತೆಲಂಗಾಣ ರಾಜ್ಯದ ಯಾದಾದ್ರಿ ಜಿಲ್ಲೆಯ ಮೋಂಗಿರ್‌ ನಗರದ ನಿಹಾರಿಕಾ ತನ್ನ ಸ್ನೇಹಿತ ಹರಿಯಾಣ ಮೂಲದ ಅಂಕೂರ್‌ ರಾಣನ ಸಹಾಯ ಪಡೆದಿದ್ದಾಳೆ. ಡ್ರಾಪ್‌ ಮಾಡುವ ನೆಪದಲ್ಲಿ ಪತಿ ರಮೇಶ್‌ ಕುಮಾರ್‌ ನ ಕಾರಿನಲ್ಲಿ ಬಂದ ಇಬ್ಬರು ಉಪ್ಪಳ್‌-ಭುವನಗಿರಿ ನಡುವಿನ ಹೆದ್ದಾರಿಯ ಬಳಿ ಕಾರನ್ನು ಬದಿಗೆ ನಿಲ್ಲಿಸಿದ್ದಾರೆ. ನಂತರ ಇಬ್ಬರು ಸೇರಿ ರಮೇಶ್‌ ಕುಮಾರ್‌ ನನ್ನು ಕೊಲೆ ಮಾಡಿದ್ದಾರೆ. ನಂತರ ಬೆಂಗಳೂರಿನ ಹೊರಮಾವು ಎಂಬಲ್ಲಿಗೆ ಬರುವ ನಿಹಾರಿಕಾ ತನ್ನ ಮತ್ತೂಬ್ಬ ಸ್ನೇಹಿತ ನಿಖಿಲ್ ಬಳಿ ಕೊಲೆಯ ವಿಚಾರ ತಿಳಿಸುತ್ತಾಳೆ. ಶವವನ್ನು ಯಾರಿಗೂ ಸಿಗದಂತೆ ನಾಶ ಮಾಡುವ ಉದ್ದೇಶದಿಂದ ಸುಂಟಿಕೊಪ್ಪ ಬಳಿಯ ತೋಟಕ್ಕೆ ತಂದು ಬೆಂಕಿ ಹಚ್ಚಿ ಆರೋಪಿಗಳು ಕಾರಿನಲ್ಲಿ ಮರಳಿದ್ದಾರೆ ಎನ್ನುವ ಆರೋಪದಡಿ ತನಿಖೆ ನಡೆಸಲಾಗುತ್ತಿತ್ತು. ನಿಹಾರಿಕಾ ಹಾಗೂ ನಿಖಿಲ್ ಈಗಾಗಲೇ ಬಂಧನದಲ್ಲಿದ್ದಾರೆ.

Related posts

ಸುಳ್ಯ : ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪವಿಭಾಗದ ಎಇಇ ಹನುಮಂತರಾಯಪ್ಪರಿಗೆ ಬೀಳ್ಕೊಡುಗೆ, 17 ವರ್ಷ ಕಾರ್ಯ ನಿರ್ವಹಿಸಿದ್ದ ಅಧಿಕಾರಿ

ಬಾಳುಗೋಡು: ಎಚ್ಚರ ತಪ್ಪಿದ್ರೆ ಜೀವಕ್ಕೇ ಅಪಾಯ, ಜನ ಸಂಚಾರದ ವೇಳೆಯೇ ಸಂಭವಿಸಬಹುದು ದುರಂತ ..!

‘ಉದ್ಯೋಗಿಗಳ ಮೇಲೆ ನಾವು ದಬ್ಬಾಳಿಕೆ ಮಾಡಿಲ್ಲ’ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ. ಕೆ.ವಿ ಚಿದಾನಂದ ಸ್ಪಷ್ಟನೆ