ಕೊಡಗು

ಮಡಿಕೇರಿ: ಮಾಜಿ ಸಚಿವರೊಬ್ಬರ ಮಗನ ಲೈನ್ ಮನೆಯಲ್ಲಿದ್ದ ಅಸ್ಸಾಂ ಕಾರ್ಮಿಕರಿಂದ ಗೋಮಾಂಸ ಮಾರಾಟ ಯತ್ನ, ಸಿಡಿದೆದ್ದ ಹಿಂದೂ ಪರ ಸಂಘಟನೆಗಳು

73
Spread the love

ನ್ಯೂಸ್ ನಾಟೌಟ್: ಇತ್ತೀಚಿನ ದಿನಗಳಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಬಿಳಿಗೇರಿಯಲ್ಲಿ ಅಸ್ಸಾಂ ಕಾರ್ಮಿಕರು ಗೋಮಾಂಸ ಮಾರಾಟ ಮಾಡುವ ಸಂದರ್ಭದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಅಸ್ಸಾಂ ಕಾರ್ಮಿಕರು ಮಾಂಸ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ.

ಪೊಲೀಸರು ಮಾರಲು ತಯಾರಿ ಮಾಡಿಟ್ಟುಕೊಂಡಿದ್ದ ಗೋಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಜಿ ಸಚಿವರೊಬ್ಬರ ಮಗನ ಲೈನ್ ಮನೆಯಲ್ಲಿದ್ದ ಅಸ್ಸಾಂ ಕಾರ್ಮಿಕರು ಇಂತಹ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸ್ ತನಿಖೆ ಆರಂಭವಾಗಿದೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

See also  ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಡಿಕೇರಿಯ ಕಾರ್ಯಕರ್ತ ನೇಣಿಗೆ ಶರಣು..! ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದ ವ್ಯಕ್ತಿ..!
  Ad Widget   Ad Widget   Ad Widget   Ad Widget   Ad Widget   Ad Widget