ಕೊಡಗು

ಕೊಡಗು ವೈದ್ಯ ಕಾಲೇಜಿನ 34 ವೈದ್ಯ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು, ಕಾಲೇಜು ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳಿಗೆ ಐಸೋಲೇಷನ್

1k

ಮಡಿಕೇರಿ: ಕೊಡಗು ವೈದ್ಯಕೀಯ ಕಾಲೇಜಿನ ಸುಮಾರು 34 ವಿದ್ಯಾರ್ಥಿಗಳಿಗೆ ಕೊರೊನಾ  ಸೋಂಕು ದೃಢಪಟ್ಟಿದೆ. ಕಾಲೇಜು ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳನ್ನು ಐಸೋಲೇಷನ್ ಮಾಡಲಾಗಿದ್ದು, ಆನ್ ಲೈನ್ ಮೂಲಕ ತರಗತಿಗಳನ್ನು ತೆಗೆದುಕೊಳ್ಳಲಾಗುತ್ತಿದೆ.  ಪ್ರಾಥಮಿಕ ಸಂಪರ್ಕಿತ ಎಲ್ಲಾ ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಈ ಬಗ್ಗೆ ಕಾಲೇಜಿನ ಡೀನ್ ಡಾ.ಕಾರ್ಯಪ್ಪ ಪ್ರತಿಕ್ರಿಯೆ ನೀಡಿದ್ದು, ಕಳೆದ ವಾರದ ಹಿಂದೆ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿತ್ತು. ಆದಕಾರಣ ಎಲ್ಲಾ ವಿದ್ಯಾರ್ಥಿಗಳಿಗೆ ಸಾಮೂಹಿಕವಾಗಿ ತಪಾಸಣೆ ನಡೆಸಲಾಗಿದೆ. ಈ ಸಂದರ್ಭದಲ್ಲಿ 34 ವಿದ್ಯಾರ್ಥಿಗಳಲ್ಲಿ ಸೋಂಕು ಕಂಡುಬಂದಿದೆ ಎಂದಿದ್ದಾರೆ.

ಸೋಂಕಿತರಿಗೆ ಕಾಲೇಜಿನಲ್ಲಿಯೇ ಐಸೋಲೇಷನ್ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಸದ್ಯಕ್ಕೆ ಆನ್ ಲೈನ್ ಮೂಲಕ ತರಗತಿ ತೆಗೆದುಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳೆಲ್ಲರೂ ಆರೋಗ್ಯವಾಗಿದ್ದಾರೆ. ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ ಎಂದು ಹೇಳಿದ್ದಾರೆ.

See also  ಕಿವಿ ಚುಚ್ಚಲೆಂದು ಆಸ್ಪತ್ರೆಗೆ ಕರೆದೊಯ್ದ ವೇಳೆ ಅಸುನೀಗಿದ 6 ತಿಂಗಳ ಶಿಶು! ವೈದ್ಯರ ಮಹಾ ಎಡವಟ್ಟು,ಮಗುವಿನ ಬಾಯಲ್ಲಿ ನೊರೆ,ಈ ವೇಳೆ ಆಗಿದ್ದೇನು? 
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget